ಸಹಾಯವಾಣಿಕರೆ ಮಾಡಿದರೆ 72 ಗಂಟೆಯೊಳಗಾಗಿ  ಪಿಂಚಣಿ ಮಂಜೂರಾತಿ ಪತ್ರ ನೀಡುವ ವ್ಯವಸ್ಥೆ ಜಾರಿಗೆ : ಸಚಿವ ಅಶೋಕ್‌  – Vishwanews24

Featured, ರಾಜ್ಯ ನ್ಯೂಸ್

ಸಹಾಯವಾಣಿಕರೆ ಮಾಡಿದರೆ 72 ಗಂಟೆಯೊಳಗಾಗಿ  ಪಿಂಚಣಿ ಮಂಜೂರಾತಿ ಪತ್ರ ನೀಡುವ ವ್ಯವಸ್ಥೆ ಜಾರಿಗೆ : ಸಚಿವ ಅಶೋಕ್‌  – Vishwanews24

ಬೆಂಗಳೂರು:  ಕಂದಾಯ ಇಲಾಖೆಶೀಘ್ರದಲ್ಲಿ ಆರಂಭಿಸಲಿರುವ ಸಹಾಯವಾಣಿಕರೆ ಮಾಡಿದ 72 ಗಂಟೆಯೊಳಗಾಗಿ ಪಿಂಚಣಿದಾರರಿಗೆ ಮಂಜೂರಾತಿ ಪತ್ರ ತಲುಪಿಸುವ ಯೋಜನೆ ಜಾರಿ ತರಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು.

ಬಿಜೆಪಿಯ ಪಿ.ಎಂ. ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿವಿಧ ವರ್ಗಗಳಿಗೆ ನೀಡುವ ಮಾಸಾಶನ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ, ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಯೋಜನೆ ಮಂಜೂರಾತಿ ಪತ್ರ ನೀಡುವ ಯೋಜನೆ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಹೊಸ ಸಾಫ್ಟ್‌ವೇರ್‌ರೂಪಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಆರಂಭಿಸಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರಕಿದ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೆ ರೈತರ ಆಯ್ದ ದಾಖಲೆಗಳನ್ನು ತಲುಪಿಸುವ ಕಾರ್ಯ ಮಾಡಲಾಗಿದೆ. ಮುಂದುವರೆದು ಪಿಂಚಣಿ ಮಂಜೂರಾತಿ ಪತ್ರವನ್ನು ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.

ಹಲಾಲ್ ಸ್ವೀಕರಿಸುವುದು, ಬಿಡುವುದು ಜನರ ಇಚ್ಛೆಗೆ ಬಿಟ್ಟದ್ದು , ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಬಿ.ಸಿ ನಾಗೇಶ್

Leave a Reply