ಬೆಂಗಳೂರು : ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬ್ಯಾಂಕ್‌ಗಳ ಈ ಕ್ರಮವನ್ನು ಸೈಬರ್ ವಂಚಕರು ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ.
ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ, ಈ ಹಣವನ್ನ ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ” ಎಂದಿದ್ದಾನೆ.
ಇದರಿಂದ ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ, ವಂಚಕ ನಿಮ್ಮ ಬ್ಯಾಂಕ್ ಮ್ಯಾನೇಜರ್ರನ್ನು ಸಂಪರ್ಕಿಸಿ ಎಂದು ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಮಹಿಳೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಖಾತೆಯಲ್ಲಿದ್ದ 2 ಲಕ್ಷ ರೂ. ಹಣ ಮಾಯವಾಗಿತ್ತು. ತಕ್ಷಣ ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ (1930)ಗೆ ಪ್ರಾಥಮಿಕ ದೂರು ನೀಡಿದ್ದಾಳೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…