Featured

ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚನೆ – vishwanews24

ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚನೆ

ಬೆಂಗಳೂರು : ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್​ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬ್ಯಾಂಕ್‌ಗಳ ಈ ಕ್ರಮವನ್ನು ಸೈಬರ್​ ವಂಚಕರು ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ.

ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ, ಈ ಹಣವನ್ನ ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ” ಎಂದಿದ್ದಾನೆ.

ಇದರಿಂದ ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ, ವಂಚಕ ನಿಮ್ಮ ಬ್ಯಾಂಕ್ ಮ್ಯಾನೇಜರ್​ರನ್ನು ಸಂಪರ್ಕಿಸಿ ಎಂದು ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಮಹಿಳೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಖಾತೆಯಲ್ಲಿದ್ದ 2 ಲಕ್ಷ ರೂ. ಹಣ ಮಾಯವಾಗಿತ್ತು. ತಕ್ಷಣ ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ (1930)ಗೆ ಪ್ರಾಥಮಿಕ ದೂರು ನೀಡಿದ್ದಾಳೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

8 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago