Featured

ಸಾಂಪ್ರದಾಯಿಕ ಮಂಗಳೂರು ದಸರಾ ; ಟ್ಯಾಬ್ಲೋ ಹಾಗೂ ದೇವರ ಮೆರವಣಿಗೆ ಇರುವುದಿಲ್ಲ : ಜನಾರ್ದನ ಪೂಜಾರಿ -Vishwanews24

ಸಾಂಪ್ರದಾಯಿಕ ಮಂಗಳೂರು ದಸರಾ ; ಟ್ಯಾಬ್ಲೋ ಹಾಗೂ ದೇವರ ಮೆರವಣಿಗೆ ಇರುವುದಿಲ್ಲ : ಜನಾರ್ದನ ಪೂಜಾರಿ -Vishwanews24

ಮಂಗಳೂರು, :ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತೀ ವರ್ಷ ನಡೆಯುವ ಮಂಗಳೂರು ದಸರಾ ಉತ್ಸವ ಎಂದಿನಂತೆ ಈ ಬಾರಿಯು ನಡೆಯಲಿದೆ. ಆದರೆ ಮಂಗಳೂರು ದಸರಾದಲ್ಲಿ ಈ ಬಾರಿ ಟ್ಯಾಬ್ಲೋ ಹಾಗೂ ದೇವರ ಮೆರವಣಿಗೆ ಇರುವುದಿಲ್ಲ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ಜಗದ್ವಿಖ್ಯಾತ ಮಂಗಳೂರು ದಸರಾಕ್ಕೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಸರಕಾರ ಮಾರ್ಗಸೂಚಿ ಯನ್ನು ಪಾಲಿಸಿಕೊಂಡು ಈ ಬಾರಿಯೂ ಸಂಪ್ರದಾಯದಂತೆ ನಡೆಸಲು ನಿರ್ಧರಿಸಲಾಗಿದೆ. ಯಾವುದೇ ಕಾರಣಕ್ಕೂ ಮಂಗಳೂರು ದಸರಾ ಮಹೋತ್ಸವವನ್ನು ನಿಲ್ಲಿಸಬಾರದು ಎಂದಿನಂತೆ ವೈಭವದಿಂದ ನಡೆಸಬೇಕು ಎಂದು ನಿರ್ಧರಿಸಲಾಗಿದೆ.

ಇದು ಭಕ್ತರು, ಉದ್ಯಮಿಗಳು, ವ್ಯಾಪಾರಿಗಳು, ಹಿತೈಷಿಗಳ ವಲಯಗಳ ಅಭಿಪ್ರಾಯವೂ ಆಗಿದೆ. ಈ ಕಾರಣದಿಂದ ಗಂಭೀರವಾಗಿ ಅಲೋಚಿಸಿದ ಆಡಳಿತ ಮಂಡಳಿ ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕ ದಸರಾ ನಡೆಸಲು ನಿರ್ಧರಿಸಲಾಗಿದೆ ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ದಸರಾ ಮಹೋತ್ಸವದಲ್ಲಿ ಎಂದಿನಂತೆ ದರ್ಬಾರು ಮಂಟಪದಲ್ಲಿ ಮಹಾಗಣಪತಿ, ಶಾರದೆ, ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ಆದರೆ ಮಂಗಳೂರು ದಸರಾದಲ್ಲಿ ಈ ಬಾರಿ ಟ್ಯಾಬ್ಲೋ, ದೇವರ ಮೆರವಣಿಗೆ ಇರುವುದಿಲ್ಲ. ಕ್ಷೇತ್ರವನ್ನು ಸಂಪೂರ್ಣ ವಿದ್ಯುದ್ದೀಪಗಳಿಂದ ಅಲಂಕರಿಸಲಾ ಗುವುದು. ಆದರೆ ನಗರದಲ್ಲಿ ಯಾವುದೇ ಅಲಂಕಾರ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಪೂಜಾರಿ ತಿಳಿಸಿದ್ದಾರೆ.

ದಸರಾ ಮಹೋತ್ಸವ ಸಂದರ್ಭ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಎಚ್ಚರವಹಿಸುವ ನಿಟ್ಟಿನಲ್ಲಿ ಕ್ಷೇತ್ರದ ಆಡಳಿತ ಸಮಿತಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ.

ಕೊರೊನಾ ಸೋಂಕಿನ ಮಧ್ಯೆಯೂ ಮಂಗಳೂರು ದಸರಾ ಮಹೋತ್ಸವ ಯಶಸ್ವಿಯಾಗಿ ನಡೆಯಬೇಕಾದರೆ ಕ್ಷೇತ್ರದ ಆಡಳಿತ ಮಂಡಳಿಯ ಜತೆ ಸಹಕಾರ ದೊಡ್ಡದು ಎಂದು ಜನಾರ್ದನ ಪೂಜಾರಿಯವರು ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago