ಬೆಂಗಳೂರು :ನಿಮಗೆ ಸಾಧ್ಯವಾದರೆ ಬಿಜೆಪಿಯ ಬಹುಮತ ಸಾಬೀತುಪಡಿಸಿ ಎಂದು ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಸವಾಲೊಂದನ್ನು ಹಾಕಿದ್ದು, ಕೇವಲ 105 ಶಾಸಕರಿಂದ ಸರ್ಕಾರ ರಚಿಸಬಹುದು ಎನ್ನುವ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ, ಅವರು ಒಪ್ಪಿದರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ 113 ಶಾಸಕರ ಬೆಂಬಲವಿದ್ದರೆ ಯಾರೂ ಬೇಕಾದರೂ ಸರ್ಕಾರ ರಚನೆ ಮಾಡಬಹುದು. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕು ಮಂಡನೆಯನ್ನು ಒಪ್ಪಿಕೊಂಡರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ. 105 ಕ್ಕಿಂತ 113 ದೊಡ್ಡದು ಎಂಬುದು ನನ್ನ ಅನಿಸಿಕೆ ಎಂದು ಟಾಂಗ್ ನೀಡಿದ್ದಾರೆ.
ಶಾಸಕ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ಮೈತ್ರಿ ಸರ್ಕಾರದಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಈ ರಾಜೀನಾಮೆಯ ನಾಟಕದ ಸೂತ್ರಧಾರರು ರಾಜ್ಯದ ಬಿಜೆಪಿ ನಾಯಕರು. ಸರ್ಕಾರವನ್ನು ಮುನ್ನಡೆಸಲು ಜನರು ಅವರಿಗೆ ಅವಕಾಶ ಕೊಡಲಿಲ್ಲ. ಹೀಗಾಗಿ, ಅವರು ಹಿಂಬಾಗಿಲ ಮೂಲಕ ಅಧಿಕಾರವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಲ್ಪವಾದರೂ ಸ್ವಾಭಿಮಾನವಿದ್ದರೆ ಕೊಳಕು ರಾಜಕಾರಣ ಮಾಡುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ಸಂವಿಧಾನಬದ್ಧವಾಗಿ ನಡೆದುಕೊಳ್ಳಲು ಸೂಚಿಸಲಿ ಎಂದು ಆಕ್ರೋಶ ಹೊರಹಾಕಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…