ಭೋಪಾಲ್: ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಚುನಾವಣೆ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ ವಿಶೇಷ ಕೋರ್ಟ್ ಆದೇಶ ನೀಡಿದೆ.
ಸಾಧ್ವಿ ಚುನಾವಣೆಗೆ ಸ್ಪರ್ಧಿಸುವುದರಿಂದ ನಿರ್ಬಂಧಿಸಬೇಕೆಂದು ಕೋರಿ ಮಾಲೇಗಾಂವ್ ಸ್ಪೋಟದಲ್ಲಿ ಮೃತಪಟ್ಟ ಸಯ್ಯದ್ ಅಜರ್ ತಂದೆ ನಿಸಾರ್ ಅಹ್ಮದ್ ಬಿಲಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಚುನಾವಣೆಯಿಂದ ಸ್ಪರ್ಧಿಸುವುದನ್ನು ತಡೆಯಲು ಕೋರ್ಟ್ಗೆ ಅಧಿಕಾರವಿಲ್ಲ. ಚುನಾವಣಾಧಿಕಾರಿಗಳು ಅದನ್ನು ನಿರ್ಧರಿಸಬೇಕು ಎಂದು ಹೇಳಿದೆ.
ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಜಾಮೀನು ರದ್ದಾದರೂ ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಸಾಧಿ್ವ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ. ಜಾಮೀನು ರದ್ದುಗೊಂಡರೂ ಚುನಾವಣೆಯಿಂದ ಹಿಂದೆ ಸರಿಯಬೇಕೆಂದೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿರುವ ಸಾಧಿ್ವ ಪ್ರಜ್ಞಾ ಸಿಂಗ್ ಠಾಕೂರ್, ಸಾರ್ವಜನಿಕರಿಂದ ಭಿಕ್ಷೆ ಮೂಲಕ ಸಂಗ್ರಹಿಸಿದ 4.40 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿದ್ದೇನೆ. ಸಾರ್ವಜನಿಕರು ನೀಡುವ ಭಿಕ್ಷೆಯೇ ತನ್ನ ಆದಾಯ. ಯಾವುದೇ, ವಾಹನ ಭೂಮಿ ತನ್ನ ಹೆಸರಲ್ಲಿ ಇಲ್ಲ ಎಂದು ಘೋಷಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…