ಅಂತಾರಾಷ್ಟ್ರೀಯ ನ್ಯೂಸ್

ಸಾನಿಯಾ ಮಿರ್ಜಾ ಜತೆಗಿನ ದಾಂಪತ್ಯ ಜೀವನ ಅಂತ್ಯ : ಪಾಕ್‌ ಜನಪ್ರಿಯ ನಟಿ ಸನಾ ಜಾವೇದ್ ಜತೆ ಶೋಯೆಬ್‌ ಮಲಿಕ್ ಎರಡನೇ ಮದುವೆ – vishwanews24

ಸಾನಿಯಾ ಮಿರ್ಜಾ ಜತೆಗಿನ ದಾಂಪತ್ಯ ಜೀವನ ಅಂತ್ಯ : ಪಾಕ್‌ ಜನಪ್ರಿಯ ನಟಿ ಸನಾ ಜಾವೇದ್ ಜತೆ ಶೋಯೆಬ್‌ ಮಲಿಕ್ ಎರಡನೇ ಮದುವೆ

ಕರಾಚಿ: ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ – ಪಾಕ್‌ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್ ನಡುವಿನ ದಾಂಪತ್ಯ ಜೀವನದ ಬೇರ್ಪಡುವಿಕೆಯ ವದಂತಿಗಳ ನಡುವೆಯೇ ಶೋಯೆಬ್‌ ಮಲಿಕ್‌ ಎರಡನೇ ಮದುವೆಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶೋಯೆಬ್ ಮಲಿಕ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾ ಗಿದ್ದಾರೆ. ಶನಿವಾರ, ಜನವರಿ 20 ರಂದು ನಡೆದ ತಮ್ಮ ವಿವಾಹ ಸಮಾರಂಭದ ಫೋಟೋಗಳನ್ನು ಶೋಯೆಬ್ ಮಲಿಕ್ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ಕೆಲ ಸಮಯದಿಂದ ಶೋಯೆಬ್‌ ಮಲಿಕ್‌ ಹಾಗೂ ಸಾನಿಯಾ ಮಿರ್ಜಾ ನಡುವಿನ ದಾಂಪತ್ಯ ಜೀವನದಲ್ಲಿ ಯಾವುದು ಸರಿಯಿಲ್ಲ ಎನ್ನುವುದರ ಬಗ್ಗೆ ಅನೇಕ ವಿಚಾರಗಳು ಹರಿದಾಡುತ್ತಿತ್ತು. ಆದರೆ ಕಳೆದ ವರ್ಷ ಇಬ್ಬರು ಜೊತೆಯಾಗಿ ಮಗನ ಹುಟ್ಟುಹಬ್ಬವನ್ನು ದುಬೈನಲ್ಲಿ ಆಚರಿಸಿಕೊಂಡಿದ್ದರು. ಇತ್ತೀಚೆಗೆ ಸಾನಿಯಾ ಮಿರ್ಜಾ ವಿಚ್ಚೇದನದ ಬಗ್ಗೆ ಒಂದು ಗೊಂದಲಕಾರಿ ಪೋಸ್ಟ್‌ ಹಂಚಿಕೊಂಡಿದ್ದರು.

ಇಬ್ಬರು ಅಧಿಕೃತವಾಗಿ ವಿಚ್ಚೇದನ ಪಡೆದ ಬಗ್ಗೆ ಬಹಿರಂಗವಾಗಿ ಹೇಳಿಲ್ಲ. ಈ ನಡುವೆಯೇ ಶೋಯೆಬ್‌ ಮಲಿಕ್‌ ಪಾಕಿಸ್ತಾನದ ಜನಪ್ರಿಯ ನಟಿ ಸನಾ ಜಾವೇದ್‌ ಅವರನ್ನು ವಿವಾಹವಾಗಿದ್ದಾರೆ. ಆ ಮೂಲಕ ಸಾನಿಯಾ ಮಿರ್ಜಾ ಅವರೊಂದಿಗಿನ ಸಂಬಂಧವನ್ನು ಅಂತ್ಯವಾಗಿಸಿ, ಹೊಸ ಜೀವನವನ್ನು ಆರಂಭಿಸಿದ್ದಾರೆ.

ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 2010 ರಲ್ಲಿ ಭಾರತದ ಹೈದರಾಬಾದ್‌ನಲ್ಲಿ ಸಾಂಪ್ರದಾಯಿಕ ಮುಸ್ಲಿಂ ಸಮಾರಂಭದಲ್ಲಿ ವಿವಾಹವಾಗಿದ್ದರು. ನಂತರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ವಲಿಮಾ (ರಿಸೆಪ್ಷನ್) ಸಮಾರಂಭ ನೆರವೇರಿತ್ತು. ದಂಪತಿ 2018 ರಲ್ಲಿ ಇಜಾನ್ ಎಂಬ ಗಂಡು ಮಗುವಿಗೆ ತಂದೆ – ತಾಯಿ ಆಗಿದ್ದರು.

ಈ ಹಿಂದೆ ಸನಾ ಜಾವೇದ್‌ ಉಮೈರ್ ಜಸ್ವಾಲ್ ಎಂಬವವರನ್ನು ವಿವಾಹವಾಗಿದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

18 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago