Featured

ಸಾಫ್ಟ್ ವೇರ್ ಅಪ್‌ಡೇಟ್ :  ಮಾ.10 ರಿಂದ 19 ರವರೆಗೆ ಎಸ್ಕಾಂನ ಎಲ್ಲಾ ಆನ್‌ಲೈನ್ ಸೇವೆ ಸ್ಥಗಿತ – Vishwanews24

ಸಾಫ್ಟ್ ವೇರ್ ಅಪ್‌ಡೇಟ್ :  ಮಾ.10 ರಿಂದ 19 ರವರೆಗೆ ಎಸ್ಕಾಂನ ಎಲ್ಲಾ  ಆನ್‌ಲೈನ್ ಸೇವೆ ಸ್ಥಗಿತ

ಬೆಂಗಳೂರು: ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಅಪ್‌ಡೇಟ್ ನಿಮಿತ್ತ ಮಾ.10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲ ಎಸ್ಕಾಂಗಳ ಆನ್‍ಲೈನ್ ಸೇವೆಗಳು ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ಪ್ರಕಟಣೆ ತಿಳಿಸಿದೆ.

ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್‍ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್‍ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಇರುವುದಿಲ್ಲ.

ಬಿಲ್ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ ಗಳನ್ನು ನೀಡಲಿದ್ದಾರೆ, ಆದರೆ ಈ ಬಿಲ್ ಗಳನ್ನು ಮಾ.20ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ.

ಆನ್‍ಲೈನ್ ಸೇವೆ ಲಭ್ಯವಿರದ ನಗರಗಳು:

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕ್ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ. ಆರ್.ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಕಲಬುರಗಿ, ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್‍ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿ ಹೊಂದಿದ ಮಾಹಿತಿ ತಂತ್ರಜ್ಞರ ತಂಡ 24/7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸುವಂತೆ ಇಂಧನ ಇಲಾಖೆ ಮನವಿ ಮಾಡಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago