Featured

ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಬಂಧನ – vishwanews24

24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣ : ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಬಂಧನ

ನವದೆಹಲಿ: 24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಂದು ಬಂಧಿಸಲಾಗಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಷೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ (ಏ.23) ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆ ಆಗ್ನೆಯ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಪಾಟ್ಕರ್ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2000ನೇ ಇಸವಿಯಲ್ಲಿ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಪಾಟ್ಕರ್ ಅಪರಾಧಿ ಎಂದು ತೀರ್ಪು ನೀಡಿದ್ದ ದೆಹಲಿ ನ್ಯಾಯಾಲಯ 5 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಶಾಲ್ ಸಿಂಗ್, ಪಾಟ್ಕರ್ ಅವರ ವಯಸ್ಸು, ಅಪರಾಧದ ತೀವ್ರತೆ ಮತ್ತು ಅವರು ಈ ಹಿಂದೆ ಯಾವುದೇ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗದೇ ಇರುವುದನ್ನು ಪರಿಗಣಿಸಿ ಏಪ್ರಿಲ್ ೮ರಂದು ಪ್ರೊಬೇಷನ್ ಅವಧಿ ವಿಧಿಸಿ ಆದೇಶ ಹೊರಡಿಸಿದ್ದರು.

ಇನ್ನು ಈ ಪ್ರೊಬೇಷನ್ ಅವಧಿಯಲ್ಲಿ ಅಪರಾಧಿಗಳನ್ನು ಜೈಲಿನಲ್ಲಿ ಇರಿಸದೆ, ಅವರ ದೈನಂದಿನ ಚಟುವಟಿಕೆಯ ಮೇಲೆ ನಿಗಾ ವಹಿಸಲಾಗುತ್ತದೆ. ಆದೇಶದ ಅನುಸಾರ, ಏಪ್ರಿಲ್ 23ರೊಳಗೆ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸುವಂತೆ ಪಾಟ್ಕರ್ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಯಾವುದೇ ದಾಖಲೆಗಳನ್ನು ಸಲ್ಲಿಸದ ಹಿನ್ನಲೆ, ಕೋರ್ಟ್ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago