ಮಂಗಳೂರು: ಪೌರತ್ವ ಕಾಯ್ಧೆ ಬಳಿಕ ಸಾಮಾಜಿಕ ಜಾಲತಾಲದಲ್ಲಿ ಸುಳ್ಳು ಸುದ್ದಿ ಸಹಿತ ತರಹೇವಾರಿ ಸುದ್ದಿಗಳು ಹಬ್ಬುತ್ತಿದ್ದು ಇದರ ವಿರುದ್ದ ನಗರ ಪೊಲೀಸ್ ಆಯುಕ್ತ ಡಾ.ಪಿ ಎಸ್ ಹರ್ಷ ಎಚ್ಚರಿಕೆ ನೀಡಿದ್ದಾರೆ.
ಡಿಜಿಟಲ್ ವಿಧಾನಗಳಾದ ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ದ್ವೇಷವನ್ನು ಹರಡುವುದರ ವಿರುದ್ಧ ಪೊಲೀಸ್ ನೋಟಿಸ್ ಜಾರಿಗೊಳಿಸಲಾಗಿದೆ. ಹೀಗಾಗಿ ವಾಟ್ಸಾಪ್, ಟೆಲಿಗ್ರಾಂ , ಫೇಸ್ ಬುಕ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೂಕ್ಷ್ಮ ಸಂದೇಶಗಳನ್ನು ಹರಡಿದರೆ ಅಂತಹ ಗ್ರೂಪ್ ಅಡ್ಮಿನ್’ಗಳ ವಿರುದ್ದ ಎಫ್ ಐ ಆರ್ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ ಎಸ್ ಹರ್ಷ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ನೋಟೀಸ್ ಜಾರಿಗೊಳಿಸಿದ್ದು, ” ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ದಕ್ಕೆ ತರುವಂತಹ ಸಂದೇಶಗಳು ಕೆಲವು ಮೊಬೈಲ್ ಸಂಖ್ಯೆಯಿಂದ ಹರಿದಾಡುತ್ತಿದ್ದು, ಕಂಡುಬಂದಿರುತ್ತದೆ. ಇಂತಹ ಸಂದೇಶಗಳ ಮೇಲೆ ಪೊಲೀಸ್ ಇಲಾಖೆಯು ತೀವ್ರ ನಿಗಾವಹಿಸಿರುತ್ತದೆ. ನೀವು ಇಂತಹ ಸಂದೇಶಗಳನ್ನು ರವಾನಿಸಿದಲ್ಲಿ ಕಲಂ 153(ಎ), 295 ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಗ್ರೂಪ್ ಅಡ್ಮಿನ್ ಗಳನ್ನು ನೇರವಾಗಿ ಹೊಣೆಗಾರಿಕೆ ಮಾಡಿ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ” ಎಂದು ಉಲ್ಲೇಖಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…