ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರಿನ ಕಾಳಿ ಮಠದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
ಋಷಿಕುಮಾರ ಸ್ವಾಮೀಜಿ ಹಿಂದುಗಳೇ ಮಸೀದಿ ಒಡೆಯಿರಿ ಎನ್ನುವ ಪ್ರಚೋದನಕಾರಿ ಹೇಳಿಕೆ ನೀಡಿದಲ್ಲದೇ ಆ ಹೇಳಿಕೆಯನ್ನು ಫೇಸ್ ಬುಕ್ ಹಾಕುವ ಮೂಲಕ ಕೋಮುಗಲಭೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಶ್ರೀರಂಗಪಟ್ಟಣದ ಮಸೀದಿ ಮುಂದೆ ವಿಡಿಯೋ ಮಾಡಿದ್ದ ಸ್ವಾಮೀಜಿ ಬಾಬರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಒಡೆಯಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು.
ಇದೀಗ ಈ ವಿಡಿಯೋ ವೈರಲ್ ಆಗಿದೆ. ಈ ಹಿನ್ನೆಲೆ ಮಸೀದಿಗೆ ಭದ್ರತೆ ಹೆಚ್ಚಿಸುವ ಕುರಿತು ವಕ್ಫ್ ಬೋರ್ಡ್ ಸಮಿತಿ ಹಾಗೂ ಕೇಂದ್ರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಗೆ ಮನವಿ ಮಾಡಿವೆ. ಮಸೀದಿ ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿ ನೀಡಿರುವ ಲಿಖಿತ ಮಾಹಿತಿ ಪ್ರಕಾರ ವಿಡಿಯೋದಲ್ಲಿ ಮಾತನಾಡಿರುವ ಋಷಿಕುಮಾರಸ್ವಾಮಿ ಹಾಗೂ ವಿಡಿಯೋ ಚಿತ್ರೀಕರಿಸಿದ ಇಬ್ಬರ ಮೇಲೂ ದೂರು ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…