Featured

ಸಾಮಾಜಿಕ ಜಾಲತಾಣದಲ್ಲಿ ನನ್ನ ಮೇಲಿನ ಆರೋಪ ಸುಳ್ಳು , ಎಲ್ಲಾ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ’ : ರವಿ ಡಿ ಚನ್ನಣ್ಣನವರ್‌ -Vishwanews24

ಸಾಮಾಜಿಕ ಜಾಲತಾಣದಲ್ಲಿ ನನ್ನ ಮೇಲಿನ ಆರೋಪ ಸುಳ್ಳು , ಎಲ್ಲಾ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ’ : ರವಿ ಡಿ ಚನ್ನಣ್ಣನವರ್‌ -Vishwanews24

ಬೆಂಗಳೂರು: ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್‌  ಹೇಳಿದ್ದಾರೆ.

ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್‌ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೆನೆ.

1.ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ

2.ನಾನು ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ , ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನ ದಾಖಲಿಸಲಿದ್ದೇನೆ

3.ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ ಕ್ರಿಮಿನಲ್ DEFEMATION ಕೇಸ್ ಹೂಡಲಿದ್ದೇನೆ.

ಇದನ್ನೂ ಓದಿ :

ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ.

ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.

ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ. ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ಎಂದು ರವಿ ಚನ್ನಣವರ್ ಹೇಳಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago