ಬೆಂಗಳೂರು: ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾದ ನಂತರ ಎಲ್ಲ ಶಾಲೆಗಳು ಪ್ರವಾಸ ರದ್ದುಗೊಳಿಸಬೇಕೆಂದು ಆದೇಶಿಸಲಾಗಿದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಇದೀಗ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸ ಮಾಡದಂತೆ, ಹಮ್ಮಿಕೊಂಡಿದ್ದಲ್ಲಿ ಕೂಡಲೇ ಹಿಂತಿರುಗಿ ಬರುವಂತೆ ಯಾವುದೇ ಸೂಚನೆ /ನಿರ್ದೇಶನ ನೀಡಿರುವುದಿಲ್ಲ ಎಂದು ಸುತ್ತೋಲೆ ಸ್ಪಷ್ಟ ಪಡಿಸಿದೆ.
ಮುಂದುವರೆದು ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪುವಾಸಗಳನ್ನು ಉಲ್ಲೇಖ 2 ಮತ್ತು 3 ರಲ್ಲಿ ನೀಡಿರುವ ಸೂಚನೆಗಳು ಮತ್ತು ನಿರ್ದೇಶನಗಳಂತೆ ಹಾಗೂ ಈ ಕೆಳಕಂಡ ಅಂಶಗಳನ್ನೊಳಗೊಂಡಂತೆ ಡಿಸೆಂಬರ್ 2024 ಮಾಹೆಯೊಳಗೆ ಪೂರ್ಣಗೊಳಿಸುವುದು.
ಪ್ರವಾಸವನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಪೂರ್ವಭಾವಿಯಾಗಿ ಯೋಜನೆ ಯನ್ನು ಕೈಗೊಳ್ಳುವುದು ಹಾಗೂ ಅದರಂತೆ ಪ್ರವಾಸವನ್ನು ಕೈಗೊಳ್ಳುವುದು.
ಪ್ರವಾಸದ ಸಂಧರ್ಭದಲ್ಲಿ ಮಕ್ಕಳನ್ನು ಯಾವುದೇ ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು, ಹಾಗೂ ಎಲ್ಲ ಸ್ಥಳಗಳಲ್ಲಿ ಮತ್ತು ಸಂದರ್ಭಗಳಲ್ಲಿ ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರು ವಿದ್ಯಾರ್ಥಿಗಳ ಜೊತೆ ಇದ್ದು, ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಎಲ್ಲ ಅವಶ್ಯ
ಕ್ರಮಗಳನ್ನು ಕೈಗೊಳ್ಳುವುದು. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಉಂಟಾಗುವ ಯಾವುದೇ ಅವಘಡಕ್ಕೆ/ಹಾನಿಗೆ ಸಂಭಂಧಿಸಿದ ಶಾಲಾ ಮುಖ್ಯಸ್ಥರು ಮತ್ತು ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರೇ ಜವಾಬ್ದಾರರಾಗಿರುತ್ತಾರೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…