ನವದೆಹಲಿ: ಟೀಂ ಇಂಡಿಯಾ ತಾರಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಕಳೆದ ವರ್ಷ ಅದ್ಭುತ ಲಯದಲ್ಲಿದ್ದರು. ಇದೀಗ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಹಾರ್ದಿಕ್ ಪಾಂಡ್ಯ, ಇದೀಗ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಭಾರತ ಟಿ20 ತಂಡದ ಪೂರ್ಣಾವಧಿ ನಾಯಕತ್ವದ ಹೊಸ್ತಿಲಲ್ಲಿರುವ ಹಾರ್ದಿಕ್ ಪಾಂಡ್ಯ, ಸೋಮವಾರ(ಮಾ.06)ವಷ್ಟೇ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ, 25 ಮಿಲಿಯನ್(ಎರಡೂವರೆ ಕೋಟಿ) ಫಾಲೋವರ್ಸ್ ಹೊಂದಿದ ಅತಿಕಿರಿಯ ಕ್ರಿಕೆಟಿಗ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ತುಂಬಾ ಅಚ್ಚರಿಯ ವಿಷಯವೆಂದರೇ, ಹಾರ್ದಿಕ್ ಪಾಂಡ್ಯ, ಜಾಗತಿಕ ಕ್ರೀಡಾತಾರೆಯರಾದ ರಾಫೆಲ್ ನಡಾಲ್, ರೋಜರ್ ಫೆಡರರ್, ಎರ್ಲಿಂಗ್ ಹಾಲಾಂಡ್ ಅವರಷ್ಟೇ ಫಾಲೋವರ್ಸ್ ಹೊಂದಿದ್ದಾರೆ.
ಹಾರ್ದಿಕ್ ಪಾಂಡ್ಯ, ಸದ್ಯ ಇನ್‌ಸ್ಟಾಗ್ರಾಂನಲ್ಲಿ 25.1 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಇದರ ಬೆನ್ನಲ್ಲೇ ಇನ್‌ಸ್ಟಾಗ್ರಾಂನಲ್ಲೇ ತಮ್ಮ ಫಾಲೋವರ್ಸ್‌ಗೆ ವಿಡಿಯೋ ಸಂದೇಶದ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ” ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಪ್ರತಿಯೊಬ್ಬ ಅಭಿಮಾನಿಯೂ ನನ್ನ ಪಾಲಿಗೆ ತುಂಬಾ ವಿಶೇಷ. ಸಾಕಷ್ಟು ವರ್ಷಗಳಿಂದ ನನ್ನ ಮೇಲೆ ಪ್ರೀತಿ-ವಿಶ್ವಾಸವನ್ನಿಟ್ಟಿರುವ ನಿಮ್ಮೆಲ್ಲರಿಗೂ ನಾನು ಚಿರಋಣಿ” ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…