ನವದೆಹಲಿ : ‘ಸಾಮಾಜಿಕ ಜಾಲತಾಣ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕೆಂಬ ಮನವಿಗೆ ಸಂಬಂಧಿಸಿದಂತೆ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು’ ಎಂದು ಫೇಸ್‌ಬುಕ್ ಸಂಸ್ಥೆ ಮಾಡಿರುವ ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿದೆ.
ನ್ಯಾಯಮೂರ್ತಿಗಳಾದ ದೀಪಕ್ ಗುಪ್ತ ಹಾಗೂ ಅನಿರುದ್ಧ ಬೋಸ್ ಅವರನ್ನೊಳಗೊಂಡ ಪೀಠವು ಕೇಂದ್ರ ಸರ್ಕಾರ, ಗೂಗಲ್, ಟ್ವಿಟರ್, ಯೂಟ್ಯೂಬ್ ಹಾಗೂ ಇತರ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 13ರ ಒಳಗಾಗಿ ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಆಧಾರ್ ಜೋಡಣೆಗೆ ಸಂಬಂಧಿಸಿದಂತೆ ಪ್ರಸಕ್ತ ನಡೆಯುತ್ತಿರುವ ವಿಚಾರಣೆಯನ್ನು ಮುಂದುವರಿಸಬಹುದು. ಆದರೆ ಈ ಸಂಬಂಧ ಅಂತಿಮ ಆದೇಶವನ್ನು ನೀಡಬಾರದು ಎಂದು ಪೀಠವು ಮದ್ರಾಸ್ ಹೈಕೋರ್ಟ್‌ಗೆ ಸೂಚನೆ ನೀಡಿದೆ.
ಫೇಸ್‌ಬುಕ್, ಟ್ವಿಟರ್, ವಾಟ್ಸಪ್ ಸೇರಿದಂತೆ ಇನ್ನಿತರ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಮ್ಮ ಪ್ರೊಫೈಲ್‌ಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಬೇಕೆಂಬ ಫೇಸ್‌ಬುಕ್ ಕೋರಿಕೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…