ಸಾಮೂಹಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಿ : ಪ್ರತಾಪ್ ಸಿಂಹ -Vishwanews24
ಸಾಮೂಹಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಿ : ಪ್ರತಾಪ್ ಸಿಂಹ -Vishwanews24
ಮೈಸೂರು: ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿಲ್ಲವೇ? ಚರ್ಚ್ ಗಳಲ್ಲಿ ಸಂಡೆ ಮಾಸ್ ನಡೆಯುತ್ತಿಲ್ಲವೇ? ಹಾಗೇ ಸಾಮೂಹಿಕ ಗಣೇಶೋತ್ಸವ ಆಚರಣೆಗೂ ಅವಕಾಶ ನೀಡಿ ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್, ಚರ್ಚ್ ಗಳಲ್ಲಿ ಸಂಡೆ ಮಾಸ್ ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಗಣೇಶೋತ್ಸವಕ್ಕೂ ಅವಕಾಶ ನೀಡಿ. ಕೋವಿಡ್ ನಿಯಮಾವಳಿ ಕಟ್ಟುನಿಟ್ಟಿನ ಅನುಷ್ಠಾನ ಮಾಡಿ, ಅವಕಾಶ ಮಾಡಿಕೊಡಿ. ಅದ್ಧೂರಿಯಾಗಿಯೇ ಮಾಡಬೇಕೆಂದು ಹೇಳುತ್ತಿಲ್ಲ. ಆದರೆ ಉತ್ಸವ ನಡೆಯಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲ ಅಂಶಗಳನ್ನು ಗಣನೆಗೆ ತಡಗೆದುಕೊಂಡಿದ್ದಾರೆ ಎಂಬ ವಿಶ್ವಾಸ ಇದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಸಂಸದರು ತಿಳಿಸಿದರು.
