ಹಾಸನ: “ಈ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಉಚ್ಚರಿಸಿದರು.
ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಶಿವಕುಮಾರ್ ಅವರು ಮಾತನಾಡಿ “ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಮೊದಲು ಹಾಸನಾಂಬೆ ತಾಯಿಯ ಪಾದಗಳಿಗೆ ಸಾಷ್ಟಾಂಗ ನಮನ ಮಾಡುತ್ತೇನೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. 25 ವರ್ಷಗಳ ನಂತರ ಹಾಸನದ ಮಹಾಜನತೆ ಕಾಂಗ್ರೆಸ್ ಪಕ್ಷದ ಯುವಕನನ್ನು ಸಂಸತ್ತಿಗೆ ಕಳಿಸಿದ್ದೀರಿ. ಈ ಭಾಗದ ಧ್ವನಿಯಾಗಲು, ನೊಂದ ತಾಯಂದಿರಿಗೆ ರಕ್ಷಣೆ ನೀಡಲು ಶ್ರೇಯಸ್ ಪಟೇಲ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ನಿಮಗೆ ನಮಸ್ಕಾರ” ಎಂದರು.
ಐದು ಗ್ಯಾರಂಟಿಗಳು ಪರ್ಮನೆಂಟು: “ಸರ್ಕಾರದ ಶಕ್ತಿ ನೂರೆಂಟು, ಐದು ಗ್ಯಾರಂಟಿಗಳು ಪರ್ಮನೆಂಟು, 2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಇದನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸುಳ್ಳಿನ ಸರಮಾಲೆಗಳಿಗೆ ಸಂಡೂರು, ಶಿಗ್ಗಾವಿ, ಚನ್ನಪಟ್ಟಣದಲ್ಲಿ ಜನ ಉತ್ತರ ನೀಡಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದ ಕಾರಣ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಆರ್ಥಿಕ ಶಕ್ತಿ ತುಂಬಲಾಗಿದೆ ಎಂದು ಹಳೆ ಡೈಲಾಗ್ ಹೇಳುವ ಮೂಲಕ ಮೈತ್ರಿ ಸರ್ಕಾರಕ್ಕೆ” ಟಾಂಗ್ ನೀಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…