Featured

ಸಾಯೋವರೆಗೂ ಸಿದ್ದರಾಮಯ್ಯನವರ ಬೆನ್ನಿಗೆ ಬಂಡೆಯಂತೆ  ಇರ್ತೇನೆ , ಇದು ಕನಕಪುರ ಬಂಡೆಯ ಇತಿಹಾಸ: ಡಿಸಿಎಂ ಡಿಕೆಶಿ – vishwanews24

ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ

2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು, ಇದನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ..

ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ..

ಹಾಸನ: “ಈ ಡಿ.ಕೆ. ಶಿವಕುಮಾರ್​​​​ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಉಚ್ಚರಿಸಿದರು.

ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಶಿವಕುಮಾರ್​​​ ಅವರು ಮಾತನಾಡಿ “ಕಾಂಗ್ರೆಸ್​​​​​​ ಪಕ್ಷದ ಜನಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಮೊದಲು ಹಾಸನಾಂಬೆ ತಾಯಿಯ ಪಾದಗಳಿಗೆ ಸಾಷ್ಟಾಂಗ ನಮನ ಮಾಡುತ್ತೇನೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. 25 ವರ್ಷಗಳ ನಂತರ ಹಾಸನದ ಮಹಾಜನತೆ ಕಾಂಗ್ರೆಸ್​​ ಪಕ್ಷದ ಯುವಕನನ್ನು ಸಂಸತ್ತಿಗೆ ಕಳಿಸಿದ್ದೀರಿ. ಈ ಭಾಗದ ಧ್ವನಿಯಾಗಲು, ನೊಂದ ತಾಯಂದಿರಿಗೆ ರಕ್ಷಣೆ ನೀಡಲು ಶ್ರೇಯಸ್ ಪಟೇಲ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ನಿಮಗೆ ನಮಸ್ಕಾರ” ಎಂದರು.

ಐದು ಗ್ಯಾರಂಟಿಗಳು ಪರ್ಮನೆಂಟು: “ಸರ್ಕಾರದ ಶಕ್ತಿ ನೂರೆಂಟು, ಐದು ಗ್ಯಾರಂಟಿಗಳು ಪರ್ಮನೆಂಟು, 2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಇದನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸುಳ್ಳಿನ ಸರಮಾಲೆಗಳಿಗೆ ಸಂಡೂರು, ಶಿಗ್ಗಾವಿ, ಚನ್ನಪಟ್ಟಣದಲ್ಲಿ ಜನ ಉತ್ತರ ನೀಡಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದ ಕಾರಣ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಆರ್ಥಿಕ ಶಕ್ತಿ ತುಂಬಲಾಗಿದೆ ಎಂದು ಹಳೆ ಡೈಲಾಗ್​ ಹೇಳುವ ಮೂಲಕ ಮೈತ್ರಿ ಸರ್ಕಾರಕ್ಕೆ” ಟಾಂಗ್ ನೀಡಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago