Featured

ಸಾಯೋವರೆಗೂ ಸಿದ್ದರಾಮಯ್ಯನವರ ಬೆನ್ನಿಗೆ ಬಂಡೆಯಂತೆ  ಇರ್ತೇನೆ , ಇದು ಕನಕಪುರ ಬಂಡೆಯ ಇತಿಹಾಸ: ಡಿಸಿಎಂ ಡಿಕೆಶಿ – vishwanews24

ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ

2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು, ಇದನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ..

ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ..

ಹಾಸನ:ಈ ಡಿ.ಕೆ. ಶಿವಕುಮಾರ್​​​​ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಉಚ್ಚರಿಸಿದರು.

ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಶಿವಕುಮಾರ್​​​ ಅವರು ಮಾತನಾಡಿ “ಕಾಂಗ್ರೆಸ್​​​​​​ ಪಕ್ಷದ ಜನಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಮೊದಲು ಹಾಸನಾಂಬೆ ತಾಯಿಯ ಪಾದಗಳಿಗೆ ಸಾಷ್ಟಾಂಗ ನಮನ ಮಾಡುತ್ತೇನೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. 25 ವರ್ಷಗಳ ನಂತರ ಹಾಸನದ ಮಹಾಜನತೆ ಕಾಂಗ್ರೆಸ್​​ ಪಕ್ಷದ ಯುವಕನನ್ನು ಸಂಸತ್ತಿಗೆ ಕಳಿಸಿದ್ದೀರಿ. ಈ ಭಾಗದ ಧ್ವನಿಯಾಗಲು, ನೊಂದ ತಾಯಂದಿರಿಗೆ ರಕ್ಷಣೆ ನೀಡಲು ಶ್ರೇಯಸ್ ಪಟೇಲ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ನಿಮಗೆ ನಮಸ್ಕಾರ” ಎಂದರು.

ಐದು ಗ್ಯಾರಂಟಿಗಳು ಪರ್ಮನೆಂಟು: “ಸರ್ಕಾರದ ಶಕ್ತಿ ನೂರೆಂಟು, ಐದು ಗ್ಯಾರಂಟಿಗಳು ಪರ್ಮನೆಂಟು, 2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಇದನ್ನು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸುಳ್ಳಿನ ಸರಮಾಲೆಗಳಿಗೆ ಸಂಡೂರು, ಶಿಗ್ಗಾವಿ, ಚನ್ನಪಟ್ಟಣದಲ್ಲಿ ಜನ ಉತ್ತರ ನೀಡಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದ ಕಾರಣ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಆರ್ಥಿಕ ಶಕ್ತಿ ತುಂಬಲಾಗಿದೆ ಎಂದು ಹಳೆ ಡೈಲಾಗ್​ ಹೇಳುವ ಮೂಲಕ ಮೈತ್ರಿ ಸರ್ಕಾರಕ್ಕೆ” ಟಾಂಗ್ ನೀಡಿದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

56 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

1 hour ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

1 hour ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

1 hour ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

2 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago