ಸಾಯ್‌ ಟ್ರಯಲ್‌ನಲ್ಲಿ ನಾನು ಭಾಗಿಯಾಗುವುದಿಲ್ಲ, ನನಗೆ ಆ ಬಗ್ಗೆ ಆಸಕ್ತಿ ಇಲ್ಲ ಹಾಗೂ ತಾನು ಕಂಬಳದಲ್ಲೇ ಮುಂದುವರೆಯುತ್ತೇನೆ : ಶ್ರೀನಿವಾಸ ಗೌಡ -Vishwanews24

ಮಂಗಳೂರು : ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ಅಗ್ರ ಕೋಚ್‌ಗಳಿಂದ ಟ್ರಯಲ್ಸ್ (ಸಾಮರ್ಥ್ಯ ಪರೀಕ್ಷೆ)ಗೆ ಕಂಬಳ ಓಟಗಾರ ಶ್ರೀನಿವಾಸ ಗೌಡ ಅವರನ್ನು ಆಹ್ವಾನಿಸುವುದಾಗಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದ ಒಂದು ದಿನಗಳ ಬಳಿಕ ಶ್ರೀನಿವಾಸ ಗೌಡ, ತನಗೆ ಆ ಬಗ್ಗೆ ಆಸಕ್ತಿ ಇಲ್ಲ ಹಾಗೂ ತಾನು ಕಂಬಳದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಸೂರ್ಯ – ಚಂದ್ರ ಕಂಬಳ ನಡೆಯುತ್ತಿರುವ ವೇಣೂರು ಪೆರ್ಮುದೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಕಂಬಳದ ಕಾರಣದಿಂದಾಗಿ ಖ್ಯಾತಿ ಗಳಿಸಿರುವುದು ನನಗೆ ಸಂತೋಷವಾಗಿದೆ. ಆ ಕಾರಣಕ್ಕಾಗಿ ಎಲ್ಲರಿಗೂ ಧನ್ಯವಾದಗಳು.

ಸೋಮವಾರ ನಡೆಯಲಿರುವ ಸಾಯ್‌ ಟ್ರಯಲ್‌ನಲ್ಲಿ ನಾನು ಭಾಗಿಯಾಗುವುದಿಲ್ಲ. ಆದರೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಹ್ವಾನದಂತೆ ನಾನು ಅವರನ್ನು ಸೋಮವಾರ ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.

ಹಿಮ್ಮಡಿ ಕಂಬಳದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಟ್ರಾಕ್‌ ಓಟದಲ್ಲಿ ಕಾಲ್ಬೆರಳುಗಳು ಪ್ರಮುಖ ಪಾತ್ರ ವಹಿಸುತ್ತದೆ. ಕಂಬಳದಲ್ಲಿ ಓಟಗಾರನಂತೆ ಕೋಣಗಳಿಗೂ ಪ್ರಮುಖ ಪಾತ್ರವಿರುತ್ತದೆ. ಆದರೆ ಟ್ರಾಕ್‌ ಓಟದಲ್ಲಿ ಈ ರೀತಿಯಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಂಬಳ ಓಟದಿಂದ ನನಗೆ ಸಾಕಷ್ಟು ಆದಾಯ ಲಭಿಸುತ್ತದೆ. ಇದರಲ್ಲೇ ನಾನು ಸಂತೋಷವಾಗಿದ್ದೇನೆ ಎಂದು ಶ್ರೀನಿವಾಸ ಗೌಡ ಹೇಳಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

18 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

18 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

18 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

18 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

18 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

18 hours ago