ಉಡುಪಿ: ಹಿರಿಯ ಸಾರಿಗೆ ಉದ್ಯಮಿ ಪಾಂಗಳ ರಬೀಂದ್ರ ನಾಯಕ್ (99) ವಯೋಸಹಜ ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ಬುಡ್ನಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
1922ರ ಫೆಬ್ರವರಿ 9ರಂದು ಉಡುಪಿಯಲ್ಲಿ ಜನಿಸಿದ ಅವರು, ಬಾಂಬೆ ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀ ಪಡೆದು ಸ್ವಲ್ಪ ಸಮಯ ಖಾಸಗಿ ಕಂಪೆನಿಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ 1951ರಲ್ಲಿ ಹನುಮಾನ್ ಟ್ರಾನ್ಸ್ಪೋರ್ಟ ಕಂಪನಿಗೆ ಸೇರಿ 1972ರಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ, ನಂತರ ಶಿವಮೊಗ್ಗದ ಶ್ರೀಗಜಾನನ ಮೋಟಾರ್ ಟ್ರಾನ್ಸ್ಪೋರ್ಟ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರಾಗಿ 70ರ ದಶಕದಲ್ಲಿ ಅವಿಭಜಿತ ದ .ಕ. ಜಿಲ್ಲೆ ಸಹಿತ ಮಲೆನಾಡು ಭಾಗದಲ್ಲಿ ಹಳ್ಳಿಗೆ ಬಸ್ ಸೇವೆ ತಲುಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.
ಉಡುಪಿ ಜಿಲ್ಲಾಸ್ಪತ್ರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾಸ್ಪತ್ರೆಯ ಅಭಿವೃದ್ಧಿಗೆ ದೇಣಿಗೆಯನ್ನು ನೀಡಿದ್ದರು. ಉಡುಪಿಯ ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…