ಬೆಂಗಳೂರು: ಸಾರಿಗೆ ನೌಕರರ ಹತ್ತು ಬೇಡಿಕೆಗಳಲ್ಲಿ 9ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಯಾರಿದೆ. ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನಾಗಿ ಮಾಡಿದರೆ ಉಳಿದೆಲ್ಲ ನಿಗಮಗಳ ನೌಕರರು ಅದೇ ಬೇಡಿಕೆಯನ್ನು ಮುಂದಿಟ್ಟು ಮನವಿ ಮಾಡುತ್ತಾರೆ. ರಾಜ್ಯದಲ್ಲು 30 ರಿಂದ 40 ನಿಗಮಗಳಿವೆ. ಇದರಿಂದ ಸರ್ಕಾರದ ಮೇಲೆ ಭಾರೀ ಪ್ರಮಾಣದ ಹಣಕಾಸಿನ ಹೊಡೆತ ಬೀಳುತ್ತೆ. ಅಭಿವೃದ್ಧಿ ಕೆಲಸ-ಕಾರ್ಯಗಳು ನಿಂತು ಹೋಗುತ್ತವೆ. ಹೀಗಾಗಿ ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು
ನಾವು ನಮ್ಮ ಸಾರಿಗೆ ನೌಕರರೊಂದಿಗೆ ಚರ್ಚೆ ಮಾಡುತ್ತೇವೆ. ಕೋಡಿಹಳ್ಳಿ ಚಂದ್ರಶೇಖರ್ ಅವರಿಗೂ ನಮಗೂ ಸಂಬಂಧ ಇಲ್ಲ. ನಮ್ಮ ಮಾತಿಗೆ ಬೆಲೆ ಕೊಟ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಮುಂದಾಗಿದ್ದಾರೆ. ಅವರಿವರ ಮಾತಿಗೆ ಕಿವಿಗೊಡಬೇಡಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಸಾರಿಗೆ ನೌಕರರಿಗೆ ಸವದಿ ಮನವಿ ಮಾಡಿದ್ದಾರೆ
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…