ರಾಯಚೂರು: ಸಾರಿಗೆ ಬಸ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ನಡೆದಿದೆ.
ಮೃತಪಟ್ಟಿರುವ ವಿದ್ಯಾರ್ಥಿಗಳನ್ನು ಸಮರ್ಥ ಅಮರೇಶ(7) ಹಾಗೂ ಶ್ರೀಕಾಂತ್ ಮಾರೇಶ(12) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ 15 ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಶಾಲಾ ಬಸ್ ಚಾಲಕ ಹಾಗೂ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮಾನ್ವಿಯಿಂದ ರಾಯಚೂರಿಗೆ ಹೊರಟಿದ್ದ ಸಾರಿಗೆ ಬಸ್ ಹಾಗೂ ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿ ಕಡೆಗೆ ತೆರಳುತ್ತಿದ್ದ ಬಸ್ ಮಧ್ಯೆ ಢಿಕ್ಕಿ ಹೊಡೆದು ಈ ದುರ್ಘಟನೆ ಜರುಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸಾರ್ವಜನಿಕರ ಸಹಾಯದಿಂದ ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…