Featured

ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಉಂಟುಮಾಡಿದ ದುಷ್ಕರ್ಮಿಗಳಿಂದಲೇ ನಷ್ಟ ಪರಿಹಾರ ವಸೂಲಿ : ಯುಪಿಯಲ್ಲಿ ನೂತನ ನಿಯಮ ಜಾರಿಗೆ -Vishwanews24

ಲಕ್ನೋ: ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಉಂಟುಮಾಡಿದರೆ ಗಲಭೆಕೋರಿಂದ ಅದರ ನಷ್ಟ ವಸೂಲಿ ಮಾಡಲಾಗುವುದು ಯಾಕೆಂದರೆ ಉತ್ತರ ಪ್ರದೇಶ ಸರ್ಕಾರ ಯಾವುದೇ ಕಾರಣಕ್ಕೂ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಹೇಳಿದ್ದಾರೆ.

ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ಹಾನಿಯ ನಷ್ಟ ಮರಳಿ ಪಡೆಯುವಿಕೆ ನಿಯಮ 2020ರಂತೆ ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಉಂಟುಮಾಡಿದ ದುಷ್ಕರ್ಮಿಗಳಿಂದಲೇ ನಷ್ಟ ಪರಿಹಾರ ಪಡೆಯಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಜಾನ್ಸಿ, ಕಾನ್ಪುರ್, ಚಿತ್ರಕೂತ್ ಧಾಮ್, ಲಕ್ನೋ , ಅಯೋಧ್ಯೆ, ದೇವಿ ಪತನ್ ಪ್ರಯಾಗ್ ರಾಜ್ , ಅಜಮ್‌ಗರ್, ವಾರಣಾಸಿ, ಗೋರಖ್‌ಪುರ, ಬಸ್ತಿ ಮತ್ತು ವಿಂಧ್ಯಾಚಲ್ ಧಾಮ್ ವಿಭಾಗಗಳನ್ನು ಲಕ್ನೋಗಳಲ್ಲಿ ನ್ಯಾಯಮಂಡಳಿಯಲ್ಲಿ ಅಂಗೀಕರಿಸಲಾಗುವುದು. ಇದಲ್ಲದೆ, ಮೀರತ್ ನ್ಯಾಯಮಂಡಳಿಯು ಸಹರಾನ್‌ಪುರ, ಮೀರತ್ , ಮೊರಾದಾಬಾದ್, ಬರೇಲಿ ಮತ್ತು ಆಗ್ರಾ ವಿಭಾಗಗಳ ವ್ಯಾಪ್ತಿಯನ್ನು ಕೂಡ ಹೊಂದಿರುತ್ತದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಉತ್ತರಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪ್ರತಿಭಟನೆಗಳು ಭುಗಿಲೆದ್ದ ನಂತರ, ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗುವ ವೆಚ್ಚವನ್ನು ಪ್ರತಿಭಟನಾಕಾರರಿಂದ ವಸೂಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಎಚ್ಚರಿಸಿದ್ದರು. ಇದಕ್ಕಾಗಿ ಹಾನಿಯಿಂದಾದ ನಷ್ಟ ಮರುಪಡೆಯಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಪ್ರಕಟಿಸಿತ್ತು. ಅಲ್ಲದೆ ಇಂತಹ ಪ್ರಕರಣ ಇತ್ಯರ್ಥಗೊಳಿಸಲು ನ್ಯಾಯಮಂಡಳಿಗಳನ್ನು ಸ್ಥಾಪಿಸಿತ್ತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago