ಹುಬ್ಬಳ್ಳಿ : “ಸಾರ್ವಜನಿಕ ಗಣೇಶೋತ್ಸವದ ಬಗ್ಗೆ ಸೆ.5ರಂದು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಹುಬ್ಭಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೊರೊನಾ ಸಂದರ್ಭ ಹಿಂದಿನ ವರ್ಷ ಯಾವ ರೀತಿಯಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಈ ವರ್ಷ ಕೊರೊನಾ ಪರಿಸ್ಥಿತಿ ಹೇಗಿದೆ ಎನ್ನುವ ಕುರಿತು ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವರು ನೀಡುವ ವರದಿಯನ್ನುತಜ್ಞರ ತಂಡ ಪರಿಶೀಲಿಸಿದ ಬಳಿಕವೇ ನಿರ್ಧಾರ ಕೈಗೊಳ್ಳಲಾಗುವುದು” ಎಂದಿದ್ದಾರೆ.
“ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಬರಲಿದ್ದು, ಅಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ” ಎಂದು ತಿಳಿಸಿದ್ದಾರೆ.
“ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದಿಂದ ಮಹಾನಗರ ಪಾಲಿಕೆಯಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ. ಆ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು. ಬಡವರ ಹಾಗೂ ಕೊಳಗೇರಿ ನಿವಾಸಿಗಳಿಗೆ ಇನ್ನಷ್ಟು ಮೂಲ ಸೌಕರ್ಯ ನೀಡಲಾಗುವುದು” ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…