Featured

ಸಾರ್ವಜನಿಕ ಗಣೇಶೋತ್ಸವ : ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ – ಹೊಸ ಮಾರ್ಗಸೂಚಿ ಪ್ರಕಟ -Vishwanews24

ಬೆಂಗಳೂರು,: ಕೋವಿಡ್ ಭೀತಿಯ ಕಾರಣದಿಂದ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿ , ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಯನ್ನು ನಿಷೇಧಿಸಿ ಹೊರಡಿಸಿದ್ದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪರಿಷ್ಕೃತಗೊಳಿಸಿದ್ದು ಇದೀಗ ಹೊಸ ನಿಯಮ ರೂಪಿಸಿ ಸಂಘ ಸಂಸ್ಥೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆ ಗ್ರೀನ್ ಸಿಗ್ನಲ್ ನೀಡಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ” ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ” ಎಂದು ಬರೆದುಕೊಂಡಿದ್ದಾರೆ.

ಪರಿಷ್ಕೃತ ಮಾರ್ಗಸೂಚಿ ಇಂತಿದೆ:

1. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವವರು ಮೂರ್ತಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಪ್ರತಿಷ್ಠಾಪನೆ ಮಾಡುವವರು ಎರಡು ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬೇಕು.

2. ಪಾರಂಪರಿಕವಾಗಿ ಗಣೇಶೋತ್ಸವ ಮಾಡುವಲ್ಲಿ ಗಣೇಶೋತ್ಸವ ಸಮಿತಿ ಅಥವಾ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್‌ ಕಾರ್ಪೋರೇಷನ್‌ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.

3. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದ ಒಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬಹುದು.

4. ಗಣೇಶೋತ್ಸವದ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಾಣ ಮಾಡಬೇಕು. ಒಮ್ಮೆಲೆ 20 ಕ್ಕಿಂತ ಅಧಿಕ ಜನರು ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹೀಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಅವಕಾಶವಿಲ್ಲ.

6. ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜನೆ ಮಾಡುವುದು ಮತ್ತು ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪನ ಮಾಡಿವವರು ಗಣೇಶ ಮೂರ್ತಿಯನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತ ಅಥವಾ ಹತ್ತಿರದ ಸ್ಥಳೀಯ ಸಂಸ್ಥೆಗಳ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್‌ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago