Featured

ಸಾರ್ವಜನಿಕ ಭಾಷಣದ ಘನತೆ, ಪ್ರಧಾನಿ ಸ್ಥಾನದ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್ ಕಿಡಿ – vishwanews24

“ನಾನು ನನ್ನ ಜೀವನದಲ್ಲಿ ಎಂದಿಗೂ ಒಂದು ಸಮುದಾಯದಿಂದ ಇನ್ನೊಂದು ಸಮುದಾಯವನ್ನು ಪ್ರತ್ಯೇಕಿಸಿಲ್ಲ: ಮನಮೋಹನ್‌ ಸಿಂಗ್‌

ನವದೆಹಲಿ: 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಡಕು ಮೂಡಿಸುವ ಭಾಷಣಗಳನ್ನು ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಹುದ್ದೆಯ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ಟೀಕಿಸಿದ್ದಾರೆ.

ಜೂನ್ 1 ರಂದು ನಡೆಯಲಿರುವ ಏಳನೇ ಮತ್ತು ಅಂತಿಮ ಹಂತದ ಲೋಕಸಭೆ ಚುನಾವಣೆಗೆ ಮುನ್ನ ಪಂಜಾಬ್‌ನಲ್ಲಿ ಮತದಾರರಿಗೆ ಪತ್ರದ ಮೂಲಕ ಮನವಿ ಮಾಡಿದ ಮನಮೋಹನ್ ಸಿಂಗ್, ಮತದಾರರಿಗೆ ಪ್ರೀತಿ, ಶಾಂತಿ, ಭ್ರಾತೃತ್ವ ಮತ್ತು ಸೌಹಾರ್ದತೆಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ.

ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ಧಿ ಆಧಾರಿತ ಬೆಳವಣಿಗೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆ ಸಾಧ್ಯ ಎಂದು ಮಾಜಿ ಪ್ರಧಾನಿ ಪ್ರತಿಪಾದಿಸಿದ್ದಾರೆ.

ಮೋದಿಯವರ ಇತ್ತೀಚಿನ ಚುನಾವಣಾ ಪ್ರಚಾರದ ವಾಕ್ಚಾತುರ್ಯದ ವಿರುದ್ಧ ವಾಗ್ದಾಳಿ ನಡೆಸಿದ ಮನಮೋಹನ್ ಸಿಂಗ್, “ಈ ಹಿಂದೆ ಯಾವ ಪ್ರಧಾನಿಯೂ ಸಮಾಜದ ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ಇಂತಹ ದ್ವೇಷಪೂರಿತ, ಅಸಂಸದೀಯ ಪದಗಳನ್ನು ಬಳಸಿಲ್ಲ” ಎಂದು ಬರೆದಿದ್ದಾರೆ.

“ಮೋದಿ ಜಿ ಅವರು ಅತ್ಯಂತ ಕೆಟ್ಟದಾಗಿ ದ್ವೇಷ ಭಾಷಣಗಳನ್ನು ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಒಡಕು ಮೂಡಿಸುವ ಭಾಷಣಗಳಾಗಿದ್ದು, ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಸ್ಥಾನದ ಗೌರವವನ್ನು ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ ಜಿ” ಎಂದು ಮಾಜಿ ಪ್ರಧಾನಿ ಕಿಡಿ ಕಾರಿದ್ದಾರೆ.

“ನಾನು ನನ್ನ ಜೀವನದಲ್ಲಿ ಎಂದಿಗೂ ಒಂದು ಸಮುದಾಯದಿಂದ ಇನ್ನೊಂದು ಸಮುದಾಯವನ್ನು ಪ್ರತ್ಯೇಕಿಸಿಲ್ಲ. ಅದು ಬಿಜೆಪಿಯ ಏಕೈಕ ಹಕ್ಕುಸ್ವಾಮ್ಯ” ಎಂದು ಕಾಂಗ್ರೆಸ್ ಹಿರಿಯ ನಾಯಕ ಟೀಕಿಸಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ ಸಂಪನ್ಮೂಲಗಳ ಮೊದಲ ಹಕ್ಕು ಮುಸ್ಲಿಮರಿಗೆ ಇರುತ್ತದೆ ಎಂದು ಮೋದಿ ಆರೋಪಿಸಿದ್ದರು. ಅಲ್ಲದೆ ಇದೇ ಭಾಷಣದಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದರು ಎಂದು ಮೋದಿ ಆರೋಪಿಸಿದ್ದರು. ಮೋದಿ ಆರೋಪಗಳ ಹಿನ್ನೆಲೆಯಲ್ಲಿ ಮನಮೋಹನ್ ಸಿಂಗ್ ಅವರು ಇಂದು ಬಹಿರಂಗ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ.ನವದೆಹಲಿ: 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಡಕು ಮೂಡಿಸುವ ಭಾಷಣಗಳನ್ನು ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಹುದ್ದೆಯ ಗೌರವ ಕಡಿಮೆ ಮಾಡಿದ ಮೊದಲ ಪ್ರಧಾನಿ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ಟೀಕಿಸಿದ್ದಾರೆ.

 

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

6 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

15 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

22 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

45 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

51 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

1 hour ago