Featured

ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡುವುದಕ್ಕೆ ನಿಷೇಧ ಹೇರಿದ ಹರ್ಯಾಣ ಸರ್ಕಾರ  – Vishwanews24

ಯಾವುದೇ ಧರ್ಮದವರಿಗೂ ಕೂಡ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ..

ಆಯಾ ಧರ್ಮದವರು ಪ್ರಾರ್ಥನೆ ಸಲ್ಲಿಸಲು ಅವರ ಧಾರ್ಮಿಕ ಕೇಂದ್ರಗಳಿಗೆ ಹೋಗಬೇಕು..

ಸಮಾಜದಲ್ಲಿ ಶಾಂತಿ ಕಾಪಾಡುವುದು ಹಾಗೂ ಸಮಾಜನ ಸ್ವಾಸ್ಥ ಕಾಪಾಡುವುದು ಪ್ರತಿಯೊಬ್ಬನ ಜವಾಬ್ದಾರಿ..

ಹರ್ಯಾಣ ಸಿಎಂ ಮನೋಹರ್‌ ಲಾಲ್ ಖಟ್ಟರ್‌ – VIshwanews24

ಚಂಡೀಗಢ: ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡುವುದಕ್ಕೆ ಹರ್ಯಾಣ ಸರ್ಕಾರ ನಿಷೇಧ ಹೇರಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆ ನಡೆಸುವುದಕ್ಕೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಹರ್ಯಾಣದ ಬಿಜೆಪಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಈ ಬಗ್ಗೆ ವಿಧಾನಸಭೆಯಲ್ಲೇ ಘೋಷಣೆ ಮಾಡಿರುವ ಮುಖ್ಯಮಂತ್ರಿ ಮನೋಹರ್‌ ಲಾಲ್ ಖಟ್ಟರ್‌, ಯಾವುದೇ ಧರ್ಮದವರಿಗೂ ಕೂಡ ಸಾರ್ವಜನಿಕ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ವಿಧಾನ ಸಭೆಯ ಕಲಾಪದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕಾಂಗ್ರೆಸ್‌ ಸದಸ್ಯ ಅಫ್ತಾಬ್‌ ಅಹ್ಮದ್‌ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಈ ರೀತಿ ಉತ್ತರ ನೀಡಿದ್ದಾರೆ. ಅಲ್ಲದೇ ‘ಆಯಾ ಧರ್ಮದವರಿಗೆ ಪ್ರಾರ್ಥನೆ ಸಲ್ಲಿಸಲು ಮಂದಿರ, ಮಸೀದಿ, ಇಗರ್ಜ್‌, ಗುರುದ್ವಾರಗಳಿವೆ. ಹಬ್ಬಗಳನ್ನು ಸಾರ್ವಜನಿಕವಾಗಿ ಅಚರಿಸಲು ಅವಕಾಶ ಇದೆ. ಆದರೆ ಶಕ್ತಿ ಪ್ರದರ್ಶನ ಮಾಡಿ ಇತರ ಧರ್ಮದವರ ಭಾವನೆಗೆ ಧಕ್ಕೆ ತರುವಂತೆ ನಡೆದುಕೊಳ್ಳುವುದು ಸಾಧುವಲ್ಲ’ ಎಂದು ನುಡಿದಿದ್ದಾರೆ.

ಈ ವೇಳೆ ಮಧ್ಯ ಪ್ರವೇಶ ಮಾಡಿದ ಮುಖ್ಯಮಂತ್ರಿ ಖಟ್ಟರ್‌, ಯಾರಿಗೂ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಇಲ್ಲ. ಪ್ರಾರ್ಥನೆ ಸಲ್ಲಿಸಬೇಕಾದರೆ ಮಸೀದಿ, ಮಂದಿರ, ಚರ್ಚ್, ಗುರುದ್ವಾರಕ್ಕೆ ಹೋಗಲಿ. ಸಮಾಜದಲ್ಲಿ ಶಾಂತಿ ಕಾಪಾಡುವುದು ಹಾಗೂ ಸಮಾಜನ ಸ್ವಾಸ್ಥ ಕಾಪಾಡುವುದು ಪ್ರತಿಯೊಬ್ಬನ ಜವಾಬ್ದಾರಿ ಎಂದು ನುಡಿದರು.

ಅಲ್ಲದೇ ಈಗಾಗಲೇ ಶುಕ್ರವಾರದ ಪ್ರಾರ್ಥನೆಯನ್ನು ನಿರ್ದಿಷ್ಟ ಸ್ಥಳಗಳಲ್ಲಿ ನಿರ್ವಹಿಸುವುದಾಗಿ ಕೆಲವರು ಹೇಳಿದ್ದಾರೆ. ಒಂದು ವೇಳೆ ಅಲ್ಲಿ ಅವಕಾಶ ಇಲ್ಲದೇ ಇದ್ದರೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

‘ಕೆಲವರು ಸಾರ್ವಜನಿಕವಾಗಿ ಪ್ರಾರ್ಥನೆ ಮಾಡಿದರೆ, ಅಲ್ಲಿ ಎರಡೂ ಕಡೆಯವರ ನಡುವೆ ಮುಖಾಮುಖಿ ಉಂಟಾಗಬಹುದು. ಇಂಥ ಸ್ಥಳೀಯ ಸಮಸ್ಯೆಗಳು, ಕೋಮು ಸೌಹಾರ್ಧತೆಗೆ ಧಕ್ಕೆ ಉಂಟು ಮಾಡಬಾರದು. ದಸರಾ, ಉರೂಸ್, ರಾಮ್‌ ಲೀಲಾ ಮುಂತಾದ ಕಾರ್ಯಕ್ರಮಗಳನ್ನು, ಪೂರ್ವ ಅನುಮತಿ ಪಡೆದು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ಮಾಡಬಹುದಾಗಿದೆ’ ಎಂದು ಅವರು ಸ್ಪಷ್ಟ ಪಡಿಸಿದರು.

ದೈನಂದಿನ, ಸಾಪ್ತಾಹಿಕ ಪ್ರಾರ್ಥನೆಗಳು ಶ್ರದ್ಧಾ ಕೇಂದ್ರದಲ್ಲಿಯೇ ನಡೆಯಬೇಕು. ಸಾರ್ವಜನಿಕವಾಗಿ ಪ್ರಾರ್ಥನೆ ನಡೆಯುವಲ್ಲಿ ಇರುವ ತಕರಾರುಗಳನ್ನು ಸೌಹಾರ್ಧಯುತವಾಗಿ ಬಗೆ ಹರಿಸಿಕೊಳ್ಳಬೇಕು ಎಂದು ಅವರು ಹೇಳಿದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago