ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ – vishwanews24
ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ಹೊರಡಿಸಲಾಗಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ.
ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ವಿಭಾಗೀಯ ನ್ಯಾಯಪೀಠ, ಮಧ್ಯಂತರ ಆದೇಶ ತೆರವು ಕೋರಿ ಏಕಸದಸ್ಯ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರಕಾರ ಮುಕ್ತ ಅವಕಾಶ ಹೊಂದಿದೆ ಎಂದು ತಿಳಿಸಿದೆ.
ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ : ಯುವತಿ ಅರೆಸ್ಟ್ – vishwanews24
ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ ಸೇರಿ ಯಾವುದೇ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ 2025ರ ಅಕ್ಟೋಬರ್ 18ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿ ಧಾರವಾಡದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಅಕ್ಟೋಬರ್ 28ರಂದು ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಕುರಿತು ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.
ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು – vishwanews24
