Featured

ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ವಿಚಾರ : ತಡೆಯಾಜ್ಞೆ ಪ್ರಶ್ನಿಸಿದ್ದ ಸರ್ಕಾರದ ಅರ್ಜಿ ವಜಾ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ಹೊರಡಿಸಲಾಗಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ.

ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ವಿಭಾಗೀಯ ನ್ಯಾಯಪೀಠ, ಮಧ್ಯಂತರ ಆದೇಶ ತೆರವು ಕೋರಿ ಏಕಸದಸ್ಯ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರಕಾರ ಮುಕ್ತ ಅವಕಾಶ ಹೊಂದಿದೆ ಎಂದು ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್‌ ಸೇರಿ ಯಾವುದೇ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ 2025ರ ಅಕ್ಟೋಬರ್ 18ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ‌ನೀಡಿ ಧಾರವಾಡದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಅಕ್ಟೋಬರ್ 28ರಂದು ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಕುರಿತು ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌.ಜಿ. ಪಂಡಿತ್‌ ಹಾಗೂ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.

Vishwa News 24

Recent Posts

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

29 minutes ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

1 hour ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

1 hour ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

2 hours ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

2 hours ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

2 hours ago