Featured

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ – vishwanews24

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.

21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ 2024 ಜಾರಿ ಮಾಡಿ ರಾಜ್ಯ ಸರ್ಕಾರ, ಗೆಜಟ್ ನೋಟಿಫಿಕೇಷನ್ ಹೊರಡಿಸಿದೆ.

ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸಿ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವುದರಿಂದ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿ ಕೊಡಲಾಗಿತ್ತು.

ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ. ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಈಗ ಆ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗಿದೆ‌. ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಉಗಿಯುವಂತಿಲ್ಲ. ಈ ತಿದ್ದುಪಡಿ ಕಾಯ್ದೆ ಪ್ರಕಾರ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ತಾನಾಗಿಯಾಗಲಿ ಅಥವಾ ಯಾರೇ ಇತರ ವ್ಯಕ್ತಿಯ ಪರವಾಗಿಯಾಗಲಿ ಉಪಹಾರ ಗೃಹ ಅಥವಾ ಪಬ್ ಅಥವಾ ಬಾರು ಅಥವಾ ರೆಸ್ಟೋರೆಂಟ್ ಒಳಗೊಂಡಂತೆ ಯಾವುದೇ ಸ್ಥಳದಲ್ಲಿ ಹುಕ್ಕಾ ಬಾರನ್ನು ತೆರೆಯುವಂತಿಲ್ಲ ಹಾಗೂ ನಡೆಸುವಂತಿಲ್ಲ.

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿ ನಿಯಮ‌ ಉಲ್ಲಂಘಿಸಿದವರಿಗೆ ದಂಡದ ಪ್ರಮಾಣವನ್ನು 200 ರೂ.ದಿಂದ 1,000 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಹುಕ್ಕಾ ಬಾರ್ ನಡೆಸಿ ನಿಯಮ ಉಲ್ಲಂಘಿಸುವವರಿಗೆ 1 ವರ್ಷದಿಂದ 3 ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿದಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago