ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದ ಮೂರನೇ ಹಂತದಲ್ಲಿ ನಡೆದಿದೆ.
ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ ನಿಖಿತ್ ಮತ್ತು ನಿಶ್ಚಿತ್ ಮೃತಪಟ್ಟಿದ್ದಾರೆ. ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸುಕನ್ಯಾ ಪತಿ ಜಯಾನಂದ್ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್‌ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್ ಫ್ಯಾಕ್ಟರಿ ಬಂದ್ ಮಾಡಿದ್ದರು. ಜಯಾನಂದ್ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದರು.
ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.\
ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ಮಂಗಳವಾರ ಸಾಲಗಾರರು ಮನೆ ಬಳಿ ಬಂದು ಸಾಲ ಪಾವತಿಸುವಂತೆ ಒತ್ತಡ ಹೇರಿದ್ದಾರೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಸಿಕ್ಕಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…