Featured

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ , ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಆ ಹಣ ಮರಳಿ ಸಿಗದ ಕಾರಣ ಮನನೊಂದು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.

ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಇದನ್ನೂ ಓದಿ: 

ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಅವರು ಗಾಯತ್ರಿಗೆ 10 ಸಾವಿರ ರೂಪಾಯಿ ನೀಡಿದ್ದರು. ಇದೇ ವೇಳೆ ಊರಿನ ಪರಿಚಯಸ್ಥ ಸಂತೋಷ ಮಾಧೇದ ನಾಯ್ಕ ಎಂಬಾತ ನಿಗದಿತ ಸಮಯಕ್ಕೆ ಮರಳಿ ನೀಡುವುದಾಗಿ ಹೇಳಿ ಆಕೆಯಿಂದ 10 ಸಾವಿರ ರೂಪಾಯಿ ಸಾಲ ಪಡೆದಿದ್ದ.

ಆದರೆ ನಿಗದಿತ ಸಮಯ ಕಳೆದರೂ ಹಣವನ್ನು ಮರಳಿ ನೀಡಿರಲಿಲ್ಲ. ಇದರಿಂದ ಗಾಯತ್ರಿಗೆ ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ. ಶುಲ್ಕ ಕಟ್ಟದ ಕಾರಣ ಪರೀಕ್ಷೆಯ ಹಾಲ್‌ಟಿಕೆಟ್ ಕೂಡ ದೊರೆತಿರಲಿಲ್ಲ. ಇದರಿಂದ ಮನನೊಂದ ಗಾಯತ್ರಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ – vishwanews24

ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…

1 day ago

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…

1 day ago

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

1 day ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

1 day ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

1 day ago

ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ – vishwanews24

ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ ಬೆಳಗಾವಿ: ಧರ್ಮಸ್ಥಳ…

1 day ago