ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ನಿರ್ಮಾಣದಿಂದಾಗಿ ಸಾಲಿಗ್ರಾಮದ ಹಳೆ ಮೀನು ಮಾರುಕಟ್ಟೆ ತೆರವಾಗಿದ್ದು, ಪಕ್ಕದಲ್ಲೇ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮತ್ತು ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೆರವಿನೊಂದಿಗೆ ಹೊಸ ಮಾರುಕಟ್ಟೆ ನಿರ್ಮಿಸಲಾಗಿದ್ದು, ಉದ್ಘಾಟನೆ ಇಂದು ಜರುಗಿತು.
5.30 ಲಕ್ಷ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣವಾಗಿದ್ದು, ತುರ್ತಾಗಿ ಮಾರುಕಟ್ಟೆ ನಿರ್ಮಿಸಬೇಕಾದ ಅಗತ್ಯವಿದ್ದರಿಂದ ಹಾಗೂ ಸರಕಾರದ ಅನುದಾನಕ್ಕೆ ಕಾಯುವಷ್ಟು ಕಾಲಾವಕಾಶ ಇಲ್ಲವಾದ್ದರಿಂದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು 2.30 ಲಕ್ಷ ರೂ. ಸ್ವಂತ ಹಣವನ್ನು ಮಾರುಕಟ್ಟೆ ನಿರ್ಮಾಣಕ್ಕೆ ನೀಡಿದ್ದರು. ಹಾಗೂ 3 ಲಕ್ಷ ರೂ. ಪಟ್ಟಣ ಪಂಚಾಯಿತಿ ಅನುದಾನ ವಿನಿಯೋಗಿಸಿ ನಿರ್ಮಿಸಲಾಗಿತ್ತು.
ಮೀನು ಮಾರುಕಟ್ಟೆ ಪಕ್ಕದಲ್ಲೇ ರಿಕ್ಷಾ ತಂಗುದಾಣವನ್ನೂ ಕೂಡ ಶಾಸಕರು ತನ್ನ ಹಣದಲ್ಲೇ ನಿರ್ಮಿಸಿ ಕೊಟ್ಟಿದ್ದಾರೆ.
ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯ ಹೇರ್ಳೆ, ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ, ಮುಖ್ಯಾಧಿಕಾರಿ ಅರುಣ್ ಕುಮಾರ್, ಪ.ಪಂ. ಸದಸ್ಯರಾದ ಕಾರ್ಕಡ ರಾಜು ಪೂಜಾರಿ, ರತ್ನಾ ನಾಗರಾಜ್ ಗಾಣಿಗ, ಭಾಸ್ಕರ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…