ಕಿರುತೆರೆಯ ಖ್ಯಾತ ರಿಯಾಲಿಟಿ ಶೋ `ಸರಿಗಮಪ’ ಕಾರ್ಯಕ್ರಮದಲ್ಲಿ ತನ್ನ ಚೆಂದದ ಮಾತುಗಳಿಂದಲೇ ಕರ್ನಾಟಕದ ಸಾಕಷ್ಟು ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಪುಟಾಣಿ ಜ್ಞಾನ ಗುರುರಾಜ್ ಬೆಂಗಳೂರಿನ ಸಾಲುಮರದ ತಿಮ್ಮಕ್ಕ ಇಂಟರ್‌ನ್ಯಾಶನಲ್ ಫೌಂಡೇಶನ್ ವತಿಯಿಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಸಂಗೀತಲೋಕದಲ್ಲಿ ಗುರುತಿಸಿಕೊಂಡಿರುವ ಜ್ಞಾನ, ತಮ್ಮ ಸುಮಧುರ ಕಂಠದಿಂದಲೇ ಹಂಸಲೇಖ ಸೇರಿದಂತೆ ಹಲವಾರು ಗಣ್ಯರ ಸಾರಥ್ಯದಲ್ಲಿ ಮುಂದುವರಿಯುತ್ತಿದ್ದು, ಇದೀಗ ಇಂದು ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಾಲು ಮರದ ತಿಮ್ಮಕ್ಕ ಅಭಿನಂದನಾ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಗೌರವಾರ್ಪಣೆ ಪಡೆಯಲಿದ್ದಾರೆ.
ಇನ್ನು ಈ ಪ್ರಶಸ್ತಿಯು ತಲಾ 25 ಸಾವಿರ ರೂ ನಗದು, ಬೆಳ್ಳಿಪದಕ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಜ್ಞಾನ ತಾಯಿ ರೇಖಾ ಅವರು ಕಡಬದ ಕೊಂಬಾರು ಗ್ರಾಮದ ಕಟ್ಟೆ ಇಡ್ಯಡ್ಕದವರಾಗಿದ್ದು, ಬೆಂಗಳೂರಿನ ರಾಮನಗರ ಹನುಮಾನ ಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಂಗೀತ ಶಿಕ್ಷಕಿಯಾಗಿದ್ದಾರೆ. ಜ್ಞಾನ ತಂದೆ ಗುರುರಾಜ್ ಬೆಂಗಳೂರಿನಲ್ಲಿ ಸಂಗೀತ ಗುರುಗಳಾಗಿದ್ದಾರೆ. ಜ್ಞಾನ ನೂರಾರು ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ, ಟಿ.ವಿ. ಶೋಗಳಲ್ಲಿ ಭಾಗವಹಿಸಿ ಖ್ಯಾತ ನಟರಿಂದ, ಸಂಗೀತ ಮಾಂತ್ರಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಾರ್ಯಕ್ರಮದಲ್ಲಿ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಗೈದ ಹಲವಾರಿಗೆ ಪ್ರಶಸ್ತಿ ಪ್ರಧಾನವು ನಡೆಯಲಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…