ಬೆಂಗಳೂರು,: ಕೇಂದ್ರ ಸರಕಾರ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ನಾಲ್ವರಿಗೆ ಪದ್ಮ ವಿಭೂಷಣ ಪ್ರಶಸ್ತಿ, 14 ಮಂದಿಗೆ ಪದ್ಮ ಭೂಷಣ ಮತ್ತು 94 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು, ಒಟ್ಟು 112 ಮಂದಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿದ್ದಾರೆ.
70ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ 2019ನೇ ಸಾಲಿನ ಪದ್ಮ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೇಂದ್ರ ಗೃಹ ಇಲಾಖೆ ಶುಕ್ರವಾರ ರಾತ್ರಿ 2019ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿವಿಧ ಸಾಧಕರಿಗೆ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.
ಸಾಲು ಮರಗಳನ್ನು ನೆಟ್ಟು ಬೆಳೆಸಿ ಇತಿಹಾಸ ಸೃಷ್ಟಿಸಿದ ಬೆಂಗಳೂರು ಹೊರವಲಯದ ಮಹಾ ಸಾಧಕಿ ಸಾಲು ಮರದ ತಿಮ್ಮಕ್ಕ, ಖ್ಯಾತ ನೃತ್ಯಪಟು ಪ್ರಭುದೇವ, ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್, ಕಲೆ ಮತ್ತು ಪುರಾತತ್ವ ಶಾಸ್ತ್ರವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿದ ಸಾಧಕಿ ಶಾರದಾ ಶ್ರೀನಿವಾಸನ್, ಬೆಂಗಳೂರಿನ ಐಐಎಸ್‌ಸಿಯಲ್ಲಿ ಪರಮಾಣು ಭೌತಶಾಸ್ತ್ರ ಪ್ರೊಫೆಸರ್ ಆಗಿರುವ ರೋಹಿಣಿ ಗೋಡ್ಬೋಳೆ ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…