ಚಿಕ್ಕಮಗಳೂರು: ರಾಜ್ಯದಲ್ಲಿ ನಡೆದ ಸಾಲು-ಸಾಲು ದರೋಡೆ ಪ್ರಕರಣಗಳ ವಿಚಾರವಾಗಿ ಸರ್ಕಾರದ ವಿರುದ್ಧ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಪೊಲೀಸರನ್ನು ಯಕ್ಷಗಾನ ತಡೆಯುವುದಕ್ಕೆ ನಿಯೋಜನೆ ಮಾಡುವುದು ಬೇಡ. ಸಿ.ಟಿ ರವಿ ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇದ್ರೆ ಪಕ್ಷದ ಮೇಲೆ ಮಾತ್ರ ಪರಿಣಾಮ ಬೀರುತ್ತೆ. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇರಬಾರದು. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಜೋರಾದ್ರೆ ಜನರಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕಾಂಗ್ರೆಸ್‍ನಲ್ಲಿ ಒಂದು ಕಡೆ ಟಗರು ಮತ್ತೊಂದು ಕಡೆ ಬಂಡೆ ಗುದ್ದಾಡ್ತಾ ಇದ್ರೆ ಜನರಿಗೆ ತೊಂದರೆ ಆಗುತ್ತೆ. ಬಿಜೆಪಿ ಪಕ್ಷದಲ್ಲಿನ ಆಂತರಿಕ ಕಲಹದ ಬಗ್ಗೆ ಇಂದು ಅಥವಾ ನಾಳೆ ಎಲ್ಲವೂ ಕೂಡ ಸರಿ ಹೋಗಲಿದೆ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…