ತುಮಕೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಣದಾಸೆಗೆ ಚಿಕ್ಕ ಮಕ್ಕಳನ್ನ ಕಿಡ್ನಾಪ್ ಮಾಡಿ ಮಾರಾಟ ಮಾಡುವ ಜಾಲವೊಂದನ್ನ ಪೊಲೀಸರು ಪತ್ತೆಹಚ್ಚಿ ಜೈಲಿಗೆ ಕಳುಹಿಸಿದ್ದರು. ಆ ಪ್ರಕರಣ ಆಗಿ ಕೆಲವೇ ದಿನಕ್ಕೆ ಸ್ವಂತ ಚಿಕ್ಕಮಳೆ ತನ್ನ ಸಾಲ ತೀರಿಸಲಾಗದೇ ಮನೆಗೆ ಬಂದಿದ್ದ 11 ವರ್ಷದ ಅಕ್ಕನ ಮಗಳನ್ನು ಮಾರಾಟ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಅಂದಹಾಗೇ ತುಮಕೂರಿನ ದಿಬ್ಬೂರು ನಿವಾಸಿಯಾದ ಚೌಡಮ್ಮ, ತನ್ನ ಮಗಳನ್ನ ಆಂಧ್ರ ಪ್ರದೇಶದ ಹಿಂದೂಪುರಕ್ಕೆ ತಂಗಿ ಸುಜಾತಳ ಮನೆಗೆ ಬಾಣಂತನಕ್ಕೆಂದು ಕಳಿಸಿದ್ದಳು. ಬಾಣಂತನ ಮುಗಿಸಿ ವಾಪಸ್ ಮಗಳು ಬರಲಿಲ್ಲ. ಹೀಗಾಗಿ ಚೌಡಮ್ಮ ಹಿಂದೂಪುರಕ್ಕೆ ಹೋದಾಗ ತನ್ನ ಮಗಳು ಇಲ್ಲದೆ ಇರುವುದು ತಿಳಿದಿದೆ. ಚೌಡಮ್ಮ, ಮಗಳ ಇಲ್ಲದನ್ನ ಕಂಡು ಗಾಬರಿಯಾಗಿದ್ದಾಳೆ. ಈ ವೇಳೆ ಸುಜಾತ ‘ನಾನು ಸಾಲ ಮಾಡಿಕೊಂಡಿದ್ದೆ ಸಾಲ ತೀರಿಸಲಾಗದೇ 35 ಸಾವಿರಕ್ಕೆ ಮಗಳನ್ನ ಜೀತಕ್ಕಾಗಿ ಮಾರಾಟ ಮಾಡಿರುವುದಾಗಿ ಹೇಳಿದ್ದಾಳೆ.
‘ಹಿಂದೂಪುರದ ಶ್ರೀರಾಮುಲು ಎಂಬ ವ್ಯಕ್ತಿ ಬಾತುಕೋಳಿ ಮೇಯಿಸಲು ಒತ್ತೆಯಾಳಾಗಿ ಇರಿಸಿಕೊಂಡಿದ್ದನಂತೆ. ಈ ವಿಚಾರ ತಿಳಿದ ಚೌಡಮ್ಮ, ಮಗಳನ್ನ ತನ್ನೊಂದಿಗೆ ಕಳಿಸುವಂತೆ ಬೇಡಿಕೊಂಡರೂ ಕೂಡ ಶ್ರೀ ರಾಮುಲು ಒಪ್ಪಿರಲಿಲ್ಲ. ಹಣ ನೀಡಿ ಬಾಲಕಿಯನ್ನ ಕರೆದುಕೊಂಡು ಹೋಗು ಎಂದು ಹೇಳಿದ್ದನಂತೆ. ಇನ್ನು ಚೌಡಮ್ಮ ವಾಪಸ್ ತುಮಕೂರಿಗೆ ಬಂದು ಮಗಳ ಸ್ಥಿತಿ ಬಗ್ಗೆ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕಾರ್ಮಿಕ ಇಲಾಖೆ ಅಧಿಕಾರಿ ತೇಜಾವತಿ ಜಿಲ್ಲಾ ಎಸ್ಪಿ ಅಶೋಕ್ರವರಿಗೆ ಮಾಹಿತಿ ನೀಡಿ ಬಾಲಕಿಯನ್ನ ರಕ್ಷಿಸಿ ಕರೆತಂದಿದ್ದಾರೆ.
ಈ ಘಟನೆ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಸಾಲಕ್ಕೆ ಹೆದರಿ ತನ್ನ ಅಕ್ಕನ ಮಗಳನ್ನೆ ಮಾರಾಟ ಮಾಡಿದ್ದ ಚಿಕ್ಕಮ್ಮ, ಇತ್ತ ಸ್ವಪ್ರಜ್ಞೆಯಿಂದ ತನ್ನ ಮಗಳನ್ನ ರಕ್ಷಣೆ ಮಾಡುವಲ್ಲಿ ತಾಯಿ ಯಶಸ್ವಿ ಆಗಿದ್ದಾಳೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…