Featured

ಸಾಲ ತೀರಿಸಲು ಅಕ್ಕನ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ- vishwanews24

ಸಾಲ ತೀರಿಸಲು ಅಕ್ಕನ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಣದಾಸೆಗೆ ಚಿಕ್ಕ ಮಕ್ಕಳನ್ನ ಕಿಡ್ನಾಪ್ ಮಾಡಿ ಮಾರಾಟ ಮಾಡುವ ಜಾಲವೊಂದನ್ನ ಪೊಲೀಸರು ಪತ್ತೆಹಚ್ಚಿ ಜೈಲಿಗೆ ಕಳುಹಿಸಿದ್ದರು. ಆ ಪ್ರಕರಣ ಆಗಿ ಕೆಲವೇ ದಿನಕ್ಕೆ ಸ್ವಂತ ಚಿಕ್ಕಮಳೆ ತನ್ನ ಸಾಲ ತೀರಿಸಲಾಗದೇ ಮನೆಗೆ ಬಂದಿದ್ದ 11 ವರ್ಷದ ಅಕ್ಕನ ಮಗಳನ್ನು ಮಾರಾಟ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಅಂದಹಾಗೇ ತುಮಕೂರಿನ ದಿಬ್ಬೂರು ನಿವಾಸಿಯಾದ ಚೌಡಮ್ಮ, ತನ್ನ ಮಗಳನ್ನ ಆಂಧ್ರ ಪ್ರದೇಶದ ಹಿಂದೂಪುರಕ್ಕೆ ತಂಗಿ ಸುಜಾತಳ ಮನೆಗೆ ಬಾಣಂತನಕ್ಕೆಂದು ಕಳಿಸಿದ್ದಳು. ಬಾಣಂತನ ಮುಗಿಸಿ ವಾಪಸ್ ಮಗಳು ಬರಲಿಲ್ಲ. ಹೀಗಾಗಿ ಚೌಡಮ್ಮ ಹಿಂದೂಪುರಕ್ಕೆ ಹೋದಾಗ ತನ್ನ ಮಗಳು ಇಲ್ಲದೆ ಇರುವುದು ತಿಳಿದಿದೆ. ಚೌಡಮ್ಮ, ಮಗಳ ಇಲ್ಲದನ್ನ ಕಂಡು ಗಾಬರಿಯಾಗಿದ್ದಾಳೆ. ಈ ವೇಳೆ ಸುಜಾತ ‘ನಾನು ಸಾಲ ಮಾಡಿಕೊಂಡಿದ್ದೆ ಸಾಲ‌ ತೀರಿಸಲಾಗದೇ 35 ಸಾವಿರಕ್ಕೆ ಮಗಳನ್ನ ಜೀತಕ್ಕಾಗಿ ಮಾರಾಟ ಮಾಡಿರುವುದಾಗಿ ಹೇಳಿದ್ದಾಳೆ.

‘ಹಿಂದೂಪುರದ ಶ್ರೀರಾಮುಲು ಎಂಬ ವ್ಯಕ್ತಿ ಬಾತುಕೋಳಿ ಮೇಯಿಸಲು ಒತ್ತೆಯಾಳಾಗಿ ಇರಿಸಿಕೊಂಡಿದ್ದನಂತೆ. ಈ ವಿಚಾರ ತಿಳಿದ ಚೌಡಮ್ಮ, ಮಗಳನ್ನ ತನ್ನೊಂದಿಗೆ ಕಳಿಸುವಂತೆ ಬೇಡಿಕೊಂಡರೂ ಕೂಡ ಶ್ರೀ ರಾಮುಲು ಒಪ್ಪಿರಲಿಲ್ಲ. ಹಣ ನೀಡಿ ಬಾಲಕಿಯನ್ನ ಕರೆದುಕೊಂಡು ಹೋಗು ಎಂದು ಹೇಳಿದ್ದನಂತೆ. ಇನ್ನು ಚೌಡಮ್ಮ ವಾಪಸ್ ತುಮಕೂರಿಗೆ ಬಂದು ಮಗಳ ಸ್ಥಿತಿ ಬಗ್ಗೆ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕಾರ್ಮಿಕ ಇಲಾಖೆ ಅಧಿಕಾರಿ ತೇಜಾವತಿ ಜಿಲ್ಲಾ ಎಸ್​ಪಿ ಅಶೋಕ್​ರವರಿಗೆ ಮಾಹಿತಿ ನೀಡಿ ಬಾಲಕಿಯನ್ನ ರಕ್ಷಿಸಿ ಕರೆತಂದಿದ್ದಾರೆ.

ಈ ಘಟನೆ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಸಾಲಕ್ಕೆ ಹೆದರಿ ತನ್ನ ಅಕ್ಕನ ಮಗಳನ್ನೆ ಮಾರಾಟ ಮಾಡಿದ್ದ ಚಿಕ್ಕಮ್ಮ, ಇತ್ತ ಸ್ವಪ್ರಜ್ಞೆಯಿಂದ ತನ್ನ ಮಗಳನ್ನ ರಕ್ಷಣೆ ಮಾಡುವಲ್ಲಿ ತಾಯಿ ಯಶಸ್ವಿ ಆಗಿದ್ದಾಳೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

3 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

4 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

4 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago