Featured

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ -vishwanews24

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

ಕೋಲಾರ: ಸಾಲ  ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ  ರಾಡ್‌ನಿಂದ ಹೊಡೆದು ಮಗ  ಕೊಂದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಇನ್ನೂ ಘಟನೆ ಸಂಬಂಧ 24 ಗಂಟೆಯೊಳಗೆ ಪ್ರಕರಣ ಭೇದಿಸಿ ಆರೋಪಿಯನ್ನ ಬಂಧಿಸಲಾಗಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸಾಲ ತೀರಿಸಲು ತಂದೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಗನೇ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಇದಾಗಿದೆ. ಬಂಗಾರಪೇಟೆ ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಬೆನ್ನತ್ತಿದ ಬಂಗಾರಪೇಟೆ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯನಗರ ಬಡಾವಣೆಯ ವೆಂಕಟಕೃಷ್ಣ ಬಾಬು (70) ಕೊಲೆಯಾದವರು. ಅವರ ಇಬ್ಬರು ಪುತ್ರರಲ್ಲಿ ದೊಡ್ಡ ಮಗ ಬೆಂಗಳೂರಿನಲ್ಲಿ ವಾಸವಾಗಿದ್ದು, ಚಿಕ್ಕ ಮಗ ಸೀಮೇಶ್ಕರ್ ತಂದೆಯೊಂದಿಗೆ ಬಂಗಾರಪೇಟೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಚಿಕ್ಕ ಮಗ ಸೀಮೇಶ್ಕರ್ ಸುಮಾರು 75 ಸಾವಿರ ರೂ. ಕೈಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ತಂದೆಯ ಬಳಿ ಹಣ ನೀಡುವಂತೆ ಪದೇಪದೇ ಒತ್ತಾಯಿಸುತ್ತಿದ್ದ. ಇದೇ ವಿಚಾರವಾಗಿ ಆ.29ರ ರಾತ್ರಿ ತಂದೆ-ಮಗನ ನಡುವೆ ವಾಗ್ವಾದ ನಡೆದಿದೆ.

ಮಾತಿಗೆ ಮಾತು ಬೆಳೆದು ಕೋಪಗೊಂಡ ಸೀಮೇಶ್ಕರ್, ಮನೆಯಲ್ಲಿದ್ದ ಕಬ್ಬಿಣದ ರಾಡ್‌ನಿಂದ ತಂದೆಯ ತಲೆಗೆ ಹಾಗೂ ದೇಹದ ವಿವಿಧ ಭಾಗಗಳಿಗೆ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ವೆಂಕಟಕೃಷ್ಣ ಬಾಬು ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಿದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಬಳಿಕ ಯಾರೋ ಅಪರಿಚಿತರು ಮನೆಗೆ ನುಗ್ಗಿ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ, ಘಟನೆಗೆ ಸಂಬಂಧಿಸಿದಂತೆ ವೀಡಿಯೋವನ್ನೂ ಕಳುಹಿಸಲಾಗಿದೆ. ಬಳಿಕ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಪೊಲೀಸರು ಘಟನಾ ಸ್ಥಳ, ಗಾಯಗಳ ಸ್ವರೂಪ ಹಾಗೂ ಕುಟುಂಬದ ಸದಸ್ಯರ ಹೇಳಿಕೆಗಳನ್ನು ಪರಿಶೀಲಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ವಿಚಾರಣೆ ತೀವ್ರಗೊಳಿಸಿದಾಗ ಹಣದ ವಿಚಾರಕ್ಕೆ ತಂದೆ-ಮಗನ ನಡುವೆ ನಡೆದ ಜಗಳವೇ ಕೊಲೆಗೆ ಕಾರಣ ಎಂಬುದು ಬೆಳಕಿಗೆ ಬಂದಿದೆ.

Vishwa News 24

Recent Posts

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ -vishwanews24

ರಾಜ್ಯಾದ್ಯಂತ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆ: ನಿಯಮ ಮೀರಿದರೆ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಮತ್ತು…

13 minutes ago

ಉಡುಪಿ : ಯುವತಿ ನಾಪತ್ತೆ  -vishwanews24

ಉಡುಪಿ : ಯುವತಿ ನಾಪತ್ತೆ  ಉಡುಪಿ : ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಈಶ್ವರಿ (18) ಎಂಬ ಯುವತಿ…

21 minutes ago

ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ -vishwanews24

ಮಂಗಳೂರು : ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ ; 3 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು :…

35 minutes ago

ತಮಿಳುನಾಡಿನ 52 ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ನಿಷೇಧ -vishwanews24

ತಮಿಳುನಾಡಿನ 52 ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ನಿಷೇಧ ಚೆನ್ನೈ : ತಮಿಳುನಾಡಿನ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ…

58 minutes ago

ಉಡುಪಿ : ಈ ಬಾರಿ ಕೃಷ್ಣ ಜನ್ಮಾಷ್ಟಮಿ ಗೆ ‘ಮರ್ಮೆನ್’ ಅವತಾರದಲ್ಲಿ ರವಿ ಕಟಪಾಡಿ -vishwanews24

ಉಡುಪಿ : ಈ ಬಾರಿ ಕೃಷ್ಣ ಜನ್ಮಾಷ್ಟಮಿ ಗೆ ‘ಮರ್ಮೆನ್’ ಅವತಾರದಲ್ಲಿ ರವಿ ಕಟಪಾಡಿ ಉಡುಪಿ: ವಿಭಿನ್ನ ವೇಷ ಧರಿಸಿ…

1 hour ago

ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ: ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು – vishwanews24

ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ: ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ…

1 day ago