Featured

ಸಾಲ ಬಾಧೆ : ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ  – vishwanews24

ಸಾಲ ಬಾಧೆ : ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆ

ಹರ್ಯಾಣ: ಸಾಲ ಬಾಧೆಯಿಂದ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಯಾರ್ಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್​ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27 ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ.

ಉತ್ತರಾಖಂಡ ಡೆಹ್ರಾಡೂನ್‌ನ ಪ್ರವೀಣ್ ಮಿತ್ತಲ್ (42) ಅವರ ಪತ್ನಿ, ಪೋಷಕರು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗ ಮೃತರೆಂದು ಗುರುತಿಸಲಾಗಿದೆ.

ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕುಟುಂಬವನ್ನು ಮೊದಲು ಸ್ಥಳೀಯರು ನೋಡಿದ್ದಾರೆ. ಕಾರಿನೊಳಗೆ ಅವರು ಕಷ್ಟಪಡುತ್ತಿರುವುದನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕುಟುಂಬ ಸದಸ್ಯರನ್ನು ರಕ್ಷಿಸಿದರು.

ನಂತರ, ಅವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅವರೆಲ್ಲರೂ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು.ಮೃತರನ್ನು 42 ವರ್ಷದ ಪ್ರವೀಣ್ ಮಿತ್ತಲ್, ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳು – ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಎಂದು ಗುರುತಿಸಲಾಗಿದೆ.

ಆರಂಭಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣದಂತೆ ಕಂಡುಬಂದಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿದೆ. ಅಪರಾಧ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹಿಮಾದ್ರಿ ಕೌಶಿಕ್ ಹೇಳಿದ್ದಾರೆ.

ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Vishwa News 24

Recent Posts

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

27 minutes ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

41 minutes ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

2 hours ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

2 hours ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago