Featured

ಸಾಲ ಮನ್ನಾ ಮಾಡದಿದ್ದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ : ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ

ಪಾಂಡವಪುರ: ‘ರೈತರ ಎಲ್ಲ ಬೇಡಿಕೆಗಳನ್ನು ಒಂದೇ ರಾತ್ರಿಯಲ್ಲಿ ಈಡೇರಿಸಲು ಸಾಧ್ಯವಿಲ್ಲ ಎಂದು  ಹೇಳಿದ್ದೇನೆ. ಆದರೆ, ಮುಖ್ಯಮಂತ್ರಿಗೆ ಸಾಲ ಮನ್ನಾ ವಿಚಾರದಲ್ಲಿ ಸ್ಪಷ್ಟತೆ ಇಲ್ಲ ಎಂದು ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಶುಕ್ರವಾರ ಭತ್ತ ಕೊಯ್ಲು ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ರಾತ್ರೋರಾತ್ರಿ ಸಂಪೂರ್ಣ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಏಳು ತಿಂಗಳಿಂದ ನಿರಂತರವಾಗಿ ಶ್ರಮಪಡುತ್ತಿದ್ದೇನೆ. ಆದರೆ ಸಾರ್ವಜನಿಕರು– ನನ್ನ ನಡುವೆ ಅಪನಂಬಿಕೆಯನ್ನು ಮಾಧ್ಯಮಗಳು ಸೃಷ್ಟಿಸುತ್ತಿವೆ. ಆ ಮೂಲಕ ರೈತರಲ್ಲಿ ಸಾಲ ಮನ್ನಾ ಆಗುವುದಿಲ್ಲ ಎಂಬ ಆತಂಕ ಸೃಷ್ಟಿಯಾಗಿದೆ. ಇದರಿಂದ ರೈತರ ಆತ್ಮಹತ್ಯೆಯೂ ಹೆಚ್ಚಾಗುತ್ತಿದೆ. ನನ್ನ ರೈತ ಬಂಧುಗಳು ಅಪಪ್ರಚಾರ ನಂಬಬಾರದು. ಆತ್ಮಹತ್ಯೆ ಮಾಡಿಕೊಳ್ಳಬಾರದು. ಸಾಲ ಮನ್ನಾ ಮಾಡದಿದ್ದರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ’ ಎಂದರು.

‘ದೊಡ್ಡಬಳ್ಳಾಪುರ, ಸೇಡಂನಲ್ಲಿ ಶನಿವಾರ ಸಾಲ ಮನ್ನಾಕ್ಕೆ ಚಾಲನೆ ನೀಡಲಾಗುವುದು. ಸಾಲ ಮನ್ನಾ ಪ್ರಮಾಣ ಪತ್ರವನ್ನು ಅಧಿಕಾರಿಗಳು ಮನೆಗೆ ತಂದುಕೊಡಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ, ನನ್ನನ್ನು ನಂಬಿ’ ಎಂದು ಮನವಿ ಮಾಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago