Featured

ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಪತ್ನಿ-ಪುತ್ರನ ಗೃಹಬಂಧನ ; ಮನನೊಂದು ರೈತ ಆತ್ಮಹತ್ಯೆ – vishwanews24

ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ – ಪತ್ನಿ-ಪುತ್ರನ ಗೃಹಬಂಧನ ; ಮನನೊಂದು ರೈತ ಆತ್ಮಹತ್ಯೆ

ಬೆಳಗಾವಿ: ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು.

ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜು ಖೋತಗಿ‌ ಎಂಬ ರೈತ ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ನೀಡುತ್ತಿದ್ದರು.

ಎರಡು ದಿನಗಳ ಹಿಂದೆ ಸಿದ್ದವ್ವ ಏಕಾಏಕಿ ರಾಜು ಅವರನ್ನು ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ತಾಕೀತು ಮಾಡಿದ್ದಾರೆ. ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದಕ್ಕೆ ಇದಕ್ಕೆ ಒಪ್ಪದ ಮಹಿಳೆಯು ರೈತ, ಪತ್ನಿ ಹಾಗೂ ಪುತ್ರನನ್ನು ಗೃಹ ಬಂದನದಲ್ಲಿಟ್ಟಿದ್ದಳು. ಒಂದು ದಿನದ ಬಳಿಕ ರಾಜುನನ್ನು ಬಿಡುಗಡೆ ಮಾಡಿ, ಮಗ ಮತ್ತು ಪತ್ನಿಯನ್ನು ಗೃಹಬಂಧನದಲ್ಲಿಟ್ಟಳು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 hour ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago