ಚಿತ್ರದುರ್ಗ,: “ದೇಶಕ್ಕೆ ಸ್ವಾತಂತ್ರ್ಯ ದೊರೆತು 72 ವರ್ಷಗಳು ಕಳೆದಿವೆ. ಎಚ್.ಎಸ್.ದೊರೆಸ್ವಾಮಿ ಯಾವ ವಯಸ್ಸಿನಲ್ಲಿ ಹೋರಾಟ ಮಾಡಿದ್ದರು ಎಂಬುದು ಗೊತ್ತಿಲ್ಲ. ಸಾವರ್ಕರ್ ಅವರಷ್ಟು ಲಾಠಿ ಏಟನ್ನು ದೊರೆಸ್ವಾಮಿ ತಿಂದಿದ್ದಾರಾ?” ಎಂದು ಯತ್ನಾಳ ಪ್ರಶ್ನಿಸಿದ್ದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿರುದ್ಧ ಮತ್ತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
“ದೊರೆಸ್ವಾಮಿ ಆನೆ ಇದ್ದಂತೆ. ಆನೆ ನಡೆಯುವಾಗ ನಾಯಿ ಬೊಗಳಿದರೆ ಏನೂ ಆಗದು” ಎಂಬ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ, “ಅವರು ಆನೆಯೊ, ಹಂದಿಯೊ ತಿಳಿಯದು” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶುಕ್ರವಾರ ಹೇಳಿದ್ದಾರೆ.
“ದೊರೆಸ್ವಾಮಿ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವಾಗ ಎಚ್.ಡಿ.ಕುಮಾರಸ್ವಾಮಿ ಹುಟ್ಟಿರಲಿಲ್ಲ. ಕುಮಾರಸ್ವಾಮಿ ರಾಜಕೀಯಕ್ಕೆ ಏಕೆ ಬಂದರು ಹಾಗೂ ಸಾವಿರಾರು ಕೋಟಿ ರೂಪಾಯಿ ಹಣ ಹೇಗೆ ಸಂಪಾದಿಸಿದರು ಎಂಬುದು ಗೊತ್ತಿದೆ.ಕುಮಾರಸ್ವಾಮಿಗೆ ನನ್ನ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ” ಎಂದು ಆಕ್ರೋಶಗೊಂಡಿದ್ದಾರೆ.
“ನನ್ನ ವಿರುದ್ಧ 23 ಪ್ರಕರಣಗಳಿವೆ. ನೀರಾವರಿ ಯೋಜನೆಗೆ ನಡೆದ ಹೋರಾಟ, ಪ್ರಧಾನಿ ನರೇಂದ್ರ ಮೋದಿ ಪರವಾಗಿ ಧ್ವನಿ ಎತ್ತಿದ ಪರಿಣಾಮವಾಗಿ ಈ ಪ್ರಕರಣಗಳು ದಾಖಲಾಗಿವೆ. ನನ್ನ ಮೇಲೆ ಅತ್ಯಾಚಾರ, ಭೂ ಕಬಳಿಕೆ ಹಾಗೂ ನಕಲಿ ನೋಟು ದಂಧೆಯ ಪ್ರಕರಣಗಳು ಇಲ್ಲ. ಕಾಂಗ್ರೆಸ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದೆ ಮೊದಲು ಅವರು ಕ್ಷಮೆ ಕೇಳಲಿ. ಸದನಕ್ಕೆ ಬನ್ನಿ ನಾನೂ ಉತ್ತರ ಕೊಡುತ್ತೇನೆ” ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…