ರಾಜ್ಯ ನ್ಯೂಸ್

ಸಾವಿನಲ್ಲೂ ಸಿಂಪಥಿ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ : ಸರ್ಕಾರದ ವಿರುದ್ದ ಕುಮಾರಸ್ವಾಮಿ – Vishwanews24

ಕರಾವಳಿ ಕೆರಳಿದೆ.. ಕರ್ನಾಟಕ ಕೆರಳುವುದು ಬಾಕಿ ಇದೆ..

ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ

ಬೆಂಗಳೂರು: ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವಿಟ್ ಮಾಡಿದ ಅವರು, ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ.ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ. ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ ಎಂದು ಲೇವಡಿ ಮಾಡಿದ್ದಾರೆ.

ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ” ಎಂದು ಪ್ರಶ್ನಿಸಿದ್ದಾರೆ.

40% ಕಮಿಷನ್ ,ಕೋವಿಡ್ ಹೆಸರಿನಲ್ಲಿ ಕೊಳ್ಳೆ, ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್‌ ಕೋಟಾ ,ಪಿಎಸ್ಐ ನೇಮಕದಲ್ಲಿ ಕಾಸಿನಾಟ, ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು ಎಂದು ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.

ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ.. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ ಎಂದು ಹೇಳಿದ್ದಾರೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

11 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

12 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago