Featured

ಸಾವಿರಾರು ವರ್ಷದ ಇತಿಹಾಸ ಇರುವ ಉಡುಪಿ ದೇವಸ್ಥಾನದ ಬಗ್ಗೆ ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ? : ರಕ್ಷಿತ್ ಶೆಟ್ಟಿ – Vishwanews24

ಸಾವಿರಾರು ವರ್ಷದ ಇತಿಹಾಸ ಇರುವ ಉಡುಪಿ ದೇವಸ್ಥಾನದ ಬಗ್ಗೆ ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ? : ರಕ್ಷಿತ್ ಶೆಟ್ಟಿ

ಉಡುಪಿ  ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ  ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂರು ಎಂದು ಮಿಥುನ್ ಹೇಳಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.  ಈ ಪ್ರಕರಣ ಕುರಿತಂತೆ ನಟ ರಕ್ಷಿತ್ ಶೆಟ್ಟಿ ಕೂಡ ಪ್ರತಿಕ್ರಿಯಿಸಿದ್ದಾರೆ.

ಸೋಷಿಯಲ್ ಮೀಡಿಯಾದ ತಮ್ಮ ಖಾತೆಯಲ್ಲಿ ರಕ್ಷಿತ್ ಶೆಟ್ಟಿ ಈ ವಿವಾದದ ಕುರಿತಂತೆ ಬರೆದುಕೊಂಡಿದ್ದು, ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತಗೆದುಕೊಂಡಿದ್ದಾರೆ. ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ.

 

ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ರಕ್ಷಿತ್ ಶೆಟ್ಟಿ ಈವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಸ್ವತಃ ತಮ್ಮ ಮೇಲೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದಾಗಲೂ ರಕ್ಷಿತ್ ಮೌನವಹಿಸಿದ್ದರು. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ. ರಕ್ಷಿತ್ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

8 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

10 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

10 hours ago