ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂರು ಎಂದು ಮಿಥುನ್ ಹೇಳಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣ ಕುರಿತಂತೆ ನಟ ರಕ್ಷಿತ್ ಶೆಟ್ಟಿ ಕೂಡ ಪ್ರತಿಕ್ರಿಯಿಸಿದ್ದಾರೆ.
ಸೋಷಿಯಲ್ ಮೀಡಿಯಾದ ತಮ್ಮ ಖಾತೆಯಲ್ಲಿ ರಕ್ಷಿತ್ ಶೆಟ್ಟಿ ಈ ವಿವಾದದ ಕುರಿತಂತೆ ಬರೆದುಕೊಂಡಿದ್ದು, ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತಗೆದುಕೊಂಡಿದ್ದಾರೆ. ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ.
ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ರಕ್ಷಿತ್ ಶೆಟ್ಟಿ ಈವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಸ್ವತಃ ತಮ್ಮ ಮೇಲೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದಾಗಲೂ ರಕ್ಷಿತ್ ಮೌನವಹಿಸಿದ್ದರು. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ. ರಕ್ಷಿತ್ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…