Featured

ಸಾವು ಯಾವಾಗ ಬರುತ್ತೋ, ಯಾವಾಗ ಹೋಗುತ್ತೋ ಯಾರಿಗೂ ಗೊತ್ತಿಲ್ಲ , ಆದರೆ ನಾನು ಧೃತಿಗೆಡದೇ ಹೋರಾಟ ಮಾಡುತ್ತೇನೆ : ಹೆಚ್‍ಡಿ.ದೇವೇಗೌಡ -Vishwanews24

ಹಾಸನ: ಸಾವು ಯಾವಾಗ ಬರುತ್ತೋ ಯಾವಾಗ ಹೋಗುತ್ತೋ ಗೊತ್ತಿಲ್ಲ. ಆದರೆ ನಾನು ಧೃತಿಗೆಡದೇ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ.ದೇವೇಗೌಡರು ಹೇಳಿದ್ದಾರೆ.

ಇಂದು ಹಾಸನದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕರ್ನಾಟಕ ಭೂಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಅಭಿವೃದ್ಧಿ ಕಾಯ್ದೆ ಸೇರಿದಂತೆ ರೈತರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿ ಹಿಂತೆಗೆದುಕೊಳ್ಳಲು ಆಗ್ರಹಿಸಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಪ್ರತಿಭಟನೆ ಹಮ್ಮಿಕೊಂಡಿತ್ತು.

ಪ್ರತಿಭಟನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು, ಸಂಸದರು ಸೇರಿದಂತೆ ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಈ ಪಕ್ಷ ಹುಟ್ಟಿರೋದೆ ರೈತರಿಗೋಸ್ಕರ. ಈ ವಯಸ್ಸಲ್ಲಿ ಕೊರೊನಾದಿಂದ ದೇವೇಗೌಡರಿಗೆ ಏನು ತೊಂದರೆಯಾಗುತ್ತೊ ಎಂದು ಎಲ್ಲರೂ ಹೇಳುತ್ತಾರೆ. ಆದರೆ ನಾನು ಯಾವುದಕ್ಕೂ ಧೃತಿಗೆಡಲ್ಲ. ಸಾವು ಯಾವಾಗ ಬರುತ್ತೋ, ಯಾವಾಗ ಹೋಗುತ್ತೋ ಯಾರಿಗೂ ಗೊತ್ತಿಲ್ಲ ಎಂದರು.

ಲೂಟಿಕೋರರಿಗೆ ಅನುಕೂಲವಾಗುತ್ತೆ ಎಂದು ರೈತ ವಿರೋಧಿ ಕಾಯ್ದೆ ತರಲು ಮುಂದಾಗಿದ್ದಾರೆ. ಇದು ನನಗೆ ಗೊತ್ತಿದೆ. ಇದು ವ್ಯಕ್ತಿ ದ್ವೇಷದ ಹೋರಾಟವಲ್ಲ. ನಮ್ಮ ರೈತರನ್ನು ಉಳಿಸುವುದಕ್ಕೆ ಹೋರಾಟ ಮಾಡುತ್ತಿದ್ದೇವೆ. ಇಂದು ನಮ್ಮ ರಾಜಕಾರಣಿಗಳಿಗೆ ಹಣ ಮಾಡುವ ಸ್ವಾರ್ಥ ಹೆಚ್ಚಿದೆ. ಇದರ ವಿರುದ್ಧ ಹೋರಾಟ ಮಾಡುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

5 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

6 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago