Featured

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ದಾವಣಗೆರೆ ಮೂಲದ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ – Vishwanews24

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ದಾವಣಗೆರೆ ಮೂಲದ ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ

ಬೆಂಗಳೂರು: ಬುದ್ದಿಜೀವಿ ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ  ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು  ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ದಾವಣಗೆರೆಯ ಹಿಂದೂ ಸಂಘಟನೆಯ ಸಂಚಾಲಕ ಶಿವಾಜಿರಾವ್ ಜಾಧವ್‌  ಬಂಧನಕ್ಕೆ ಒಳಗಾದ ಆರೋಪಿ. 2 ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪತ್ರದಲ್ಲಿ ಏನಿತ್ತು?
ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು.

ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.

ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು.

ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿತ್ತು.

ಈ ಬಗ್ಗೆ ಹಿಂದೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಪರಮೇಶ್ವರ್‌, ಬೆದರಿಕೆಗೆ ಒಳಗಾಗಿರುವ ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಕಮಿಷನರ್, ಡಿಜಿಪಿ ಅವರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago