ಸಿಂಗಾಪುರ: ದಕ್ಷಿಣ ಆಫ್ರಿಕಾದಿಂದ ಸಿಂಗಾಪುರಕ್ಕೆ ಪ್ರಯಾಣ ಮಾಡಿದ್ದ ಇಬ್ಬರಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದೆ. ಸಿಂಗಾಪುರದಲ್ಲೂ ಓಮಿಕ್ರಾನ್ ಮೊದಲ ಬಾರಿಗೆ ತನ್ನ ಖಾತೆ ತೆರೆದಿದೆ.
ಜೋಹನ್ಸ್‌ಬರ್ಗ್‌ನಿಂದ ಪ್ರಯಾಣಿಸಿದ್ದ ಇಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿರುವುದು ಪ್ರಾಥಮಿಕ ಪರೀಕ್ಷೆಯಿಂದ ದೃಢಪಟ್ಟಿದೆ. ಅವರನ್ನು ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ ಎಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸೋಂಕಿತರು ಪ್ರಯಾಣಿಸಿದ್ದ ವಿಮಾನದಲ್ಲೇ 19 ಮಂದಿ ಪ್ರಯಾಣ ಬೆಳೆಸಿದ್ದರು. ಅವರನ್ನೂ ಪರೀಕ್ಷೆ ಒಳಪಡಿಸಲಾಗಿದ್ದು, ಕೋವಿಡ್ ನೆಗೆಟಿವ್ ಬಂದಿದೆ. ಆದಾಗ್ಯೂ ಎಲ್ಲರನ್ನೂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಓಮಿಕ್ರಾನ್ ಸೋಂಕಿತರು ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಕೆಮ್ಮು ಮತ್ತು ಗಂಟಲು ಕೆರೆತದ ಸೌಮ್ಯ ಲಕ್ಷಣಗಳು ಇದ್ದ ಕಾರಣ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸೋಂಕಿತರಲ್ಲಿ ಒಬ್ಬರು 44 ವಯಸ್ಸಿನ (ಪುರುಷ) ಸಿಂಗಾಪುರ ಮೂಲದವರೇ ಆಗಿದ್ದಾರೆ. ಅವರು ಮೊಜಾಂಬಿಕ್ ಮೂಲಕ ಜೋಹಾನ್ಸ್‌ಬರ್ಗ್‌ಗೆ ತೆರಳಿದ್ದರು. ನ.29ರಂದು ಅವರು ಮೆಜಾಂಬಿಕ್‌ನಿಂದ ತೆರಳುವಾಗ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿತ್ತು. ಮತ್ತೊಬ್ಬರು 41 ವಯಸ್ಸಿನ ಮಹಿಳೆ ಸಿಂಗಾಪುರದವರೇ ಆಗಿದ್ದು, ದಕ್ಷಿಣ ಆಫ್ರಿಕಾದಿಂದ ನೇರವಾಗಿ ಆಗಮಿಸಿದ್ದರು ಎಂದು ಸಚಿವಾಲಯವು ಮಾಹಿತಿ ನೀಡಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…